ETV Bharat / bharat

ಹೈದರಾಬಾದ್‌ ಗ್ಯಾಂಗ್‌-ರೇಪ್: ರಾಜಕಾರಣಿಯ ಮಗ ಸೇರಿ ಮೂವರು ಬಾಲಾಪರಾಧಿಗಳಿಗೆ ಜಾಮೀನು

author img

By

Published : Jul 27, 2022, 11:33 AM IST

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಬಾಲಕರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Minors get bail in Jubilee Hills rape Case, Jubilee Hills rape Case news, Jubilee Hills rape Case updates, Three minors get bail in Hydrabad Rape case, Etv Bharat Karnataka news, Etv Bharat Kannada news, ಜೂಬಿಲಿ ಹಿಲ್ಸ್ ರೇಪ್ ಕೇಸ್, ಜುಬಿಲಿ ಹಿಲ್ಸ್ ಅತ್ಯಾಚಾರ ಪ್ರಕರಣ ಸುದ್ದಿ, ಜುಬಿಲಿ ಹಿಲ್ಸ್ ಅತ್ಯಾಚಾರ ಪ್ರಕರಣದ ಅಪ್‌ಡೇಟ್‌, ಹೈದರಾಬಾದ್ ಅತ್ಯಾಚಾರ ಪ್ರಕರಣದಲ್ಲಿ ಮೂವರಿಗೆ ಜಾಮೀನು, ಈಟಿವಿ ಭಾರತ ಕರ್ನಾಟಕ ಸುದ್ದಿ, ಈಟಿವಿ ಭಾರತ್ ಕನ್ನಡ ಸುದ್ದಿ,
ಜೂಬಿಲಿ ಹಿಲ್ಸ್ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ

ಹೈದರಾಬಾದ್: ಒಂದು ತಿಂಗಳ ಹಿಂದೆ ತೆಲಂಗಾಣದಲ್ಲಿ ಭಾರಿ ಆಕ್ರೋಶ ಮತ್ತು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಅಪ್ರಾಪ್ತ ಆರೋಪಿಗಳ ಪೈಕಿ ನಾಲ್ವರಿಗೆ ಜಾಮೀನು ದೊರೆತಿದೆ. ಈ ಪೈಕಿ ಈಗಾಗಲೇ ಮೂವರು ಬಿಡುಗಡೆಯಾಗಿದ್ದಾರೆ.

ರಾಜಕಾರಣಿಯ ಪುತ್ರ ಸೇರಿದಂತೆ ಮೂವರು ಆರೋಪಿಗಳನ್ನು ಜೂನ್ ಮೊದಲ ವಾರದಿಂದ ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ. ಇವರಿಗೆ ಬಾಲನ್ಯಾಯ ಮಂಡಳಿಯಿಂದ ಜಾಮೀನು ಸಿಕ್ಕಿದೆ. ಪ್ರಕರಣದಲ್ಲಿ ಬಂಧಿತರಾಗಿರುವ 4ನೇ ಬಾಲಕನಿಗೆ ಜಾಮೀನು ದೊರೆತರೂ ಕಾರಣಾಂತರಗಳಿಂದ ಬಿಡುಗಡೆ ವಿಳಂಬವಾಗಿದ್ದು, ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್‌ ಮೊರೆ ಹೋಗಿದ್ದಾನೆ. ಪ್ರಕರಣದ ಏಕೈಕ ವಯಸ್ಕ ಆರೋಪಿ ಸದುದ್ದೀನ್ ಮಲ್ಲಿಕ್ ಜೈಲಿನಲ್ಲಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣವೇನು?: ಮೇ 28ರಂದು ಹೈದರಾಬಾದ್‌ನ ಪ್ರತಿಷ್ಠಿತ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಐಷಾರಾಮಿ ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಗಂಭೀರ ಆರೋಪದಡಿ ಆರು ಆರೋಪಿಗಳನ್ನು ಬಂಧಿಸಲಾಗಿತ್ತು. ಅಪ್ರಾಪ್ತ ಆರೋಪಿಗಳು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ರಾಜಕೀಯವಾಗಿ ಪ್ರಭಾವಿ ಕುಟುಂಬಗಳಿಗೆ ಸೇರಿದವರು ಎಂದು ತಿಳಿದು ಬಂದಿತ್ತು. ಪಬ್‌ನಲ್ಲಿ ಪಾರ್ಟಿ ಮುಗಿಸಿ ಐವರು ಬಾಲಕರೊಂದಿಗೆ ಕಾರಿನಲ್ಲಿ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಒಬ್ಬ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಬಾಲಕಿ ತಂದೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಅದು ಅತ್ಯಾಚಾರ ಪ್ರಕರಣವಾಗಿ ಬದಲಾಗಿತ್ತು. ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಆರೋಪಿಸಿದ್ದವು. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಕೂಡ ರಾಜ್ಯದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಸುರಕ್ಷತೆ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಪೊಲೀಸರಿಂದ ವಿವರವಾದ ವರದಿ ಕೇಳಿದೆ.

ಇದನ್ನೂ ಓದಿ: ಬಾಲಪರಾಧಿಗಳನ್ನು ವಯಸ್ಕರರಂತೆ ಪರಿಗಣಿಸುವಂತೆ ಕೋರ್ಟ್​​ಗೆ ಮನವಿ ಸಲ್ಲಿಸಲು ಪೊಲೀಸರ ಚಿಂತನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.