ETV Bharat / bharat

ಇಗ್ನೋದಲ್ಲಿ 102 ಜ್ಯೂನಿಯರ್​ ಅಸಿಸ್ಟಂಟ್​, ಸ್ಟೆನೋಗ್ರಾಫರ್​ ಹುದ್ದೆ ಭರ್ತಿಗೆ ಅಧಿಸೂಚನೆ

author img

By ETV Bharat Karnataka Team

Published : Dec 4, 2023, 3:49 PM IST

IGNOU Recruitment: ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

IGNOU Job Notification for 102 Stenographer and junior assistant
IGNOU Job Notification for 102 Stenographer and junior assistant

ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ (ಇಗ್ನೋ- IGNOU) ದಲ್ಲಿ ಖಾಲಿ ಇರುವ 102 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜ್ಯೂನಿಯರ್​ ಅಸಿಸ್ಟಂಟ್​, ಟೈಪಿಸ್ಟ್​ ಮತ್ತು ಸ್ಟೆನೋಗ್ರಾಫರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 102 ಹುದ್ದೆಗಳು ಹೀಗಿವೆ.

  • ಜ್ಯೂನಿಯರ್​ ಅಸಿಸ್ಟಂಟ್​ ಮತ್ತು ಟೈಪಿಸ್ಟ್​​ - 50
  • ಸ್ಟೆನೋಗ್ರಾಫರ್​ -52

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ , ಪದವಿಯನ್ನು ಪೂರ್ಣಗೊಳಿಸಿರಬೆಕು.

ವಯೋಮಿತಿ: ಜ್ಯೂನಿಯರ್​​ ಅಸಿಸ್ಟಂಟ್​ ಮತ್ತು ಟೈಪಿಸ್ಟ್​ ಹುದ್ದೆಗೆ ಕನಿಷ್ಟ 18 ವರ್ಷ ಆಗಿದ್ದು, ಗರಿಷ್ಟ ವಯೋಮಿತಿ 27 ವರ್ಷ ಆಗಿದೆ. ಸ್ಟೆನೋಗ್ರಾಫರ್​ ಹುದ್ದೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಆಗಿರಬೇಕು.

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಜ್ಯೂನಿಯರ್​ ಅಸಿಸ್ಟಂಟ್​ ಮತ್ತು ಟೈಪಿಸ್ಟ್​ ಹುದ್ದೆಗೆ 19,900-63,200 ರೂ. ಹಾಗೂ ಸ್ಟೆನೋಗ್ರಾಫರ್​ ಹುದ್ದೆಗೆ 25,500-81,100 ರೂ. ಮಾಸಿಕ ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ಮತ್ತು ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್​ ಪರೀಕ್ಷೆ, ಶೀಘ್ರ ಲಿಪಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಡಿಸೆಂಬರ್​ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 21 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ignou.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ, ಅರ್ಜಿ ಸಲ್ಲಿಕೆ, ವೇತನದ ವಿವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.