ಜಮ್ಮು-ಕಾಶ್ಮೀರದ ಕುಲ್ಗಾಮ್ ಗುಂಡಿನ ದಾಳಿಯಲ್ಲಿ ಉಗ್ರನ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Updated on: Jan 13, 2022, 4:03 AM IST

ಜಮ್ಮು-ಕಾಶ್ಮೀರದ ಕುಲ್ಗಾಮ್ ಗುಂಡಿನ ದಾಳಿಯಲ್ಲಿ ಉಗ್ರನ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Updated on: Jan 13, 2022, 4:03 AM IST
Kulgam encounter update: ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಗುಂಡಿನ ದಾಳಿ ಮುಂದುವರೆದಿದ್ದು, ನಿನ್ನೆ ರಾತ್ರಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಓರ್ವ ಉಗ್ರ ಹತನಾಗಿದ್ದಾನೆ. ಆದರೆ ಓರ್ವ ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರ: ಕುಲ್ಗಾಮ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದ ಎನ್‌ಕೌಂಟರ್‌ನಲ್ಲಿ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದನನ್ನು ಹೊಡೆದುರಳಿಸುವಲ್ಲಿ ಸೇನಾ ಹಾಗೂ ಕಾಶ್ಮೀರದ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಗ್ರರೊಂದಿಗಿನ ಜಂಟಿ ಹೋರಾಟದ ಆರಂಭದಲ್ಲೇ ದುರಾದುಷ್ಟವಶಾತ್ ಕಾಶ್ಮೀರದ ಪೊಲೀಸ್ ಸಿಬ್ಬಂದಿ ರೋಹಿತ್ ಕುಮಾರ್ ಚಿಬ್ ಹುತಾತ್ಮರಾಗಿದ್ದಾರೆ. ದಾಳಿ ವೇಳೆ 34 ಆರ್‌ಆರ್‌ನ ಮೂವರು ಸೈನಿಕರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯದ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪರಿವಾನ್ ಗ್ರಾಮದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಎಲ್ಲಾ ಗಾಯಗಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಗುಂಡಿನ ದಾಳಿ ಮುಂದುವರೆದಿದೆ ಎಂದು ಹೇಳಿದ್ದಾರೆ. ಕಳೆದ ಹಲವು ದಿನಗಳಿಂದ ಕಾಶ್ಮೀರದ ಗಡಿ ಸಮೀಪದಲ್ಲಿ ಗುಂಡಿನ ದಾಳಿ ನಡೆಯುತ್ತಲೇ ಇದೆ.
ಇದನ್ನೂ ಓದಿ: ಪುಲ್ವಾಮಾದಲ್ಲಿ ಉಗ್ರರು - ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ
