ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,586 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 44,345,880ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 96,506 ಸಕ್ರಿಯ ಪ್ರಕರಣಗಳಿವೆ. ನಿನ್ನೆ 48 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,27,416ಕ್ಕೆ ಏರಿಕೆಯಾಗಿದೆ. ಈಗಿನ ಒಟ್ಟು ಚೇತರಿಕೆಯ ಪ್ರಮಾಣ ಶೇ.98.59 ರಷ್ಟಿದೆ.
ನಿನ್ನೆ 9,680 ಮಂದಿ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಚೇತರಿಸಿಕೊಂಡವರ ಸಂಖ್ಯೆ 4,37,33,624 ಆಗಿದೆ. ರಾಷ್ಟ್ರವ್ಯಾಪಿ ಕೋವಿಡ್ ಲಸಿಕಾಭಿಯಾನದಡಿ ಈವರೆಗೆ 210.31 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ 11,539 ಹೊಸ ಕೋವಿಡ್ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳು 1 ಲಕ್ಷಕ್ಕಿಂತ ಕಡಿಮೆ