ETV Bharat / bharat

ದೇಶದಲ್ಲಿ ದೈನಂದಿನ ಕೋವಿಡ್‌ ಸೋಂಕಿತರ ಪ್ರಮಾಣ ಸ್ವಲ್ಪ ಏರಿಕೆ

author img

By

Published : Dec 8, 2021, 10:35 AM IST

India Corona latest updates
India Covid Report: ದೇಶದಲ್ಲಿ ದೈನಂದಿನ ಸೋಂಕಿತರ ಪ್ರಮಾಣ ಸ್ವಲ್ಪ ಏರಿಕೆ

ಈವರೆಗೆ ಸುಮಾರು 65,06,60,144 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 12,13,130 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್​ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಿಂದಿನ ದಿನಕ್ಕಿಂತ ಸ್ವಲ್ಪ ಏರಿಕೆ ಕಂಡಿದೆ. ಸೋಮವಾರ ಸುಮಾರು 6,822 ಮಂದಿ ಸೋಂಕಿತರು ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 8,439 ಸೋಂಕಿತರು ಕಂಡುಬಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 9,525 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,40,89,137 ಮಂದಿ ಸೋಂಕಿನಿಂದ ಗುಣಮುಖ ಹೊಂದಿದ್ದಾರೆ. ಗುಣಮುಖರಾಗುವವರ ಪ್ರಮಾಣ 98.36ರಷ್ಟಿದ್ದು, ಇದು ಮಾರ್ಚ್​ 2020ಕ್ಕಿಂತ ಹೆಚ್ಚಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿಯಾಗಿದೆ.

ದೇಶದಲ್ಲಿ ಸಕ್ರಿಯ ಸೋಂಕಿತರು ಒಟ್ಟು 93,773 ಮಂದಿ ಇದ್ದು, ಈ ಸೋಂಕಿತರ ಸಂಖ್ಯೆ ಹಿಂದಿನ 555 ದಿನಗಳಲ್ಲೇ ಅತ್ಯಂತ ಕಡಿಮೆ. ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 0.27ರಷ್ಟು ಮಂದಿ ಮಾತ್ರ ಸಕ್ರಿಯ ಸೋಂಕಿತರಿದ್ದಾರೆ.

ದಿನಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.70ರಷ್ಟಿದ್ದು, ಒಂದು ವಾರದಲ್ಲಿ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.76ರಷ್ಟಿದೆ. ಕಳೆದ 24 ಗಂಟೆಯಲ್ಲಿ 195 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4, 73,952 ಮಂದಿ ಸಾವನ್ನಪ್ಪಿದ್ದಾರೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 65,06,60,144 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 12,13,130 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ. ಇದರೊಂದಿಗೆ ಸುಮಾರು 129.54 ಕೋಟಿ ಮಂದಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ.

ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಶೇ.50 ರಷ್ಟು ಕಡಿತಕ್ಕೆ ನಿರ್ಧಾರ: ಅದಾರ್ ಪೂನಾವಾಲಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.