ETV Bharat / bharat

ಭಾರತದಲ್ಲಿ 1,569 ಹೊಸ ಕೋವಿಡ್ ಕೇಸ್​​ ಪತ್ತೆ, 19 ಮಂದಿ ಸಾವು

author img

By

Published : May 17, 2022, 9:48 AM IST

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

india covid 19 report
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 1,569 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,25,370ಕ್ಕೆ ಏರಿಕೆಯಾಗಿದೆ. ಇದು ನಿನ್ನೆಗಿಂತ ಶೇ.28.7 ರಷ್ಟು ಕಡಿಮೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,260 ಮಂದಿ ಸಾವನ್ನಪ್ಪಿದ್ದಾರೆ.

  • #COVID19 | India reports 1,569 fresh cases, 2,467 recoveries, and 19 deaths in the last 24 hours.

    Total active cases are 16,400. Daily positivity rate (0.44%) pic.twitter.com/mQLqgVqxdg

    — ANI (@ANI) May 17, 2022 " class="align-text-top noRightClick twitterSection" data=" ">

ದೈನಂದಿನ ಪಾಸಿಟಿವಿಟಿ ದರ ಶೇ. 0.44 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.59 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 16,400 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,467 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,84,710ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 191.48 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು.. ಸಾವು ಶೂನ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.