ETV Bharat / bharat

ಭಾರತದಲ್ಲಿ 2,364 ಹೊಸ ಕೋವಿಡ್ ಕೇಸ್​​ ಪತ್ತೆ, 10 ಮಂದಿ ಸಾವು

author img

By

Published : May 19, 2022, 10:23 AM IST

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

ಕೋವಿಡ್
ಕೋವಿಡ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,364 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,29,563 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ನಿನ್ನೆ ದಾಖಲಾದ ಪ್ರಕರಣಗಳಿಗಿಂತ ಇಂದು ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.

ದೇಶಾದ್ಯಂತ ಕಳೆದೊಂದು ದಿನದಲ್ಲಿ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,303 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.50% ರಷ್ಟಿದ್ದು, ಚೇತರಿಕೆಯ ಪ್ರಮಾಣ ಶೇ. 98.75 ರಷ್ಟಿದೆ. ಸದ್ಯಕ್ಕೆ ದೇಶದಲ್ಲಿ 15,419 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,582 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,89,841 ಮಂದಿ ಗುಣಮುಖರಾಗಿದ್ದಾರೆ.

ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 191.79 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಕಳೆದೊಂದು ದಿನದಲ್ಲಿ 13,71,603 ಲಸಿಕಾ ಡೋಸ್​ ನೀಡಲಾಗಿದೆ.

ಇದನ್ನೂ ಓದಿ: ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಮತ್ತೆ ಏರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.