ETV Bharat / bharat

India Corona Update: ದೇಶದಲ್ಲಿ ದೈನಂದಿನ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ

author img

By

Published : Dec 14, 2021, 10:23 AM IST

India Covid daily update news
India Corona: ದೇಶದಲ್ಲಿ ದೈನಂದಿನ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆ

ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.58ರಷ್ಟಿದ್ದು, ಒಂದು ವಾರದಲ್ಲಿ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.68ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಿಂದಿನ ದಿನಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಸೋಮವಾರ ಸುಮಾರು 7,350 ಮಂದಿ ಸೋಂಕಿತರು ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 5,784 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 7,995 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,41,38,763 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗುವವರ ಪ್ರಮಾಣ ಶೇಕಡಾ 98.37ರಷ್ಟಿದ್ದು, ಇದು ಮಾರ್ಚ್​ 2020ಕ್ಕಿಂತ ಹೆಚ್ಚಿದೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ದೃಢಪಡಿಸಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು 88,993 ಮಂದಿ ಇದ್ದು, ಈ ಸೋಂಕಿತರ ಸಂಖ್ಯೆ ಹಿಂದಿನ 563 ದಿನಗಳಲ್ಲೇ ಅತ್ಯಂತ ಕಡಿಮೆ. ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 0.26ರಷ್ಟು ಮಂದಿ ಮಾತ್ರ ಸಕ್ರಿಯ ಸೋಂಕಿತರಿದ್ದು, ಈ ಸೋಂಕಿತರ ಸಂಖ್ಯೆ ಮಾರ್ಚ್​ 2020ಕ್ಕಿಂತ ಕಡಿಮೆಯಾಗಿವೆ.

ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.58ರಷ್ಟಿದ್ದು, ಒಂದು ವಾರದಲ್ಲಿ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.68ರಷ್ಟಿದೆ. ಕಳೆದ 24 ಗಂಟೆಯಲ್ಲಿ 252 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4,75,888 ಮಂದಿ ಸಾವನ್ನಪ್ಪಿದ್ದಾರೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 65.76 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 12,13,130 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ. ಇದರೊಂದಿಗೆ ಸುಮಾರು 133.88 ಕೋಟಿ ಮಂದಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ.

ಇದನ್ನೂ ಓದಿ: ವಾರಣಾಸಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ: ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.