ETV Bharat / bharat

ದೇಶದಲ್ಲಿಂದು 5 ಸಾವಿರಕ್ಕಿಂತ ಕಡಿಮೆ ಕೋವಿಡ್​ ಸೋಂಕಿತರು ಪತ್ತೆ.. 38 ಮಂದಿ ಸಾವು

author img

By

Published : Sep 24, 2022, 10:57 AM IST

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್​​ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.

ಕೋವಿಡ್​
covid

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,912 ಮಂದಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲೀಗ 44,436 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 38 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಈ ಪೈಕಿ ಕೇರಳದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,28,487 ಕ್ಕೆ ತಲುಪಿದೆ.

ಇದನ್ನೂ ಓದಿ: ಕೋವಿಶೀಲ್ಡ್​ನಿಂದ ಪುರುಷರ ಫಲವತ್ತತೆಗೆ ತೊಂದರೆ ಇಲ್ಲ: ಮಣಿಪಾಲ ವೈದ್ಯರ ಸಂಶೋಧನೆ

ನಿನ್ನೆ 5,719 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,39,90,414 ಕ್ಕೆ ಏರಿಕೆಯಾಗಿದ್ದು, ಚೇತರಿಕೆಯ ಪ್ರಮಾಣ ಶೇ 98.71 ರಷ್ಟಿದೆ. ಸದ್ಯಕ್ಕೆ ದೈನಂದಿನ ಪಾಸಿಟಿವಿಟಿ ದರವು 1.62 % ಇದ್ದು, ಸಾವಿನ ಪ್ರಮಾಣವು 1.19 % ಇದೆ.

ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 2,17,41,04,791 ಡೋಸ್​ ಕೋವಿಡ್ ಲಸಿಕೆ ನೀಡಲಾಗಿದೆ. ಕಳೆದೊಂದು ದಿನದಲ್ಲಿ 14,76,840 ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,03,888 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 89,33,52,145 ತಲುಪಿದೆ.

ಇದನ್ನೂ ಓದಿ: ಸೆಪ್ಟೆಂಬರ್ 30ರವರೆಗೆ ಮಾತ್ರ ಉಚಿತ ಬೂಸ್ಟರ್ ಡೋಸ್: ಡಾ ವೀಣಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.