ETV Bharat / bharat

ಭಾರತದಲ್ಲಿಂದು 2,338 ಕೋವಿಡ್‌ ಪ್ರಕರಣ ಪತ್ತೆ, 19 ಮಂದಿ ಸಾವು

author img

By

Published : May 31, 2022, 10:29 AM IST

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಸೋಂಕಿತ ಪ್ರಕರಣಗಳ ವರದಿ ಹೀಗಿದೆ.

India covid report today
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,338 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,58,087ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,630 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ.0.97 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.58 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 17,883 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಸೋಮವಾರ) 2,134 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,15,574 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 193.45 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕೋವಿಡ್-19 ಗಾಗಿ ಮೇ 30 ರವರೆಗೆ 85,04,41,292 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಸೋಮವಾರ 3,63,883 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್, ಮಂಕಿಪಾಕ್ಸ್‌ ಬಳಿಕ ಇದೀಗ ಲಸಿಕೆಯೇ ಇರದ ಕಾಂಗೋ ಹಾವಳಿ ಶುರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.