ETV Bharat / bharat

ಭಾರತದಲ್ಲಿ 2,022 ಹೊಸ ಕೋವಿಡ್​​ ಕೇಸ್​​ ಪತ್ತೆ, 46 ಮಂದಿ ಸಾವು

author img

By

Published : May 23, 2022, 9:46 AM IST

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

India covid Report
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,022 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 46 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,459 ಮಂದಿ ಸಾವನ್ನಪ್ಪಿದ್ದಾರೆ.

  • #COVID19 | India reports 2,022 fresh cases, 2,099 recoveries, and 46 deaths in the last 24 hours.

    Total active cases are 14,832. Daily positivity rate 0.69% pic.twitter.com/IiHj1lxv6K

    — ANI (@ANI) May 23, 2022 " class="align-text-top noRightClick twitterSection" data=" ">

ದೈನಂದಿನ ಪಾಸಿಟಿವಿಟಿ ದರ ಶೇ. 0.69 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.49 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.75. ಸದ್ಯ ದೇಶದಲ್ಲಿ 14,832 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಭಾನುವಾರ) 2,099 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,99,102 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 192.38 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕೋವಿಡ್-19 ಗಾಗಿ ಮೇ 22ರವರೆಗೆ 84.70 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಭಾನುವಾರ 2,94,812 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕೋವಿಡ್‌ ಹೆಚ್ಚಳ: ಭಾರತ ಸೇರಿ 16 ದೇಶಗಳಿಗೆ ಪ್ರಯಾಣ ನಿಷೇಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.