ETV Bharat / bharat

ಭಾರತದಲ್ಲಿ 2,124 ಹೊಸ ಕೋವಿಡ್​​ ಕೇಸ್​​ ಪತ್ತೆ, 17 ಮಂದಿ ಸಾವು

author img

By

Published : May 25, 2022, 9:58 AM IST

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

covid report
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,124 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,42,192ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 17 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,507 ಮಂದಿ ಸಾವನ್ನಪ್ಪಿದ್ದಾರೆ.

  • #COVID19 | India reports 2,124 fresh cases, 1,977 recoveries, and 17 deaths in the last 24 hours.

    Total active cases are 14,971. Daily positivity rate 0.46% pic.twitter.com/IRvqOnniBt

    — ANI (@ANI) May 25, 2022 " class="align-text-top noRightClick twitterSection" data=" ">

ದೈನಂದಿನ ಪಾಸಿಟಿವಿಟಿ ದರ ಶೇ. 0.46 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.49 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.75. ಸದ್ಯ ದೇಶದಲ್ಲಿ 14,971 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಮಂಗಳವಾರ) 1,977 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,02,714 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 192.67 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 118 ಮಂದಿಗೆ ಕೋವಿಡ್ ಸೋಂಕು ದೃಢ: ಸಾವು ಶೂನ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.