ನವದೆಹಲಿ: ದೇಶದಲ್ಲಿ ಹೊಸದಾಗಿ 5,379 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ 50,594 ಸಕ್ರಿಯ ಪ್ರಕರಣಗಳಿವೆ. ನಿನ್ನೆ 27 ಮಂದಿ ಬಲಿಯಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.1.67 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 2 ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಪ್ರತಿಶತ 98.70 ಹೆಚ್ಚಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 7,094 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 213.91 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿಗೆ ಕತ್ತಿ ಅವರಿಂದ ಉತ್ಕೃಷ್ಟ ಕೊಡುಗೆ: ಪ್ರಧಾನಿ ಮೋದಿ ಸಂತಾಪ