ETV Bharat / bharat

ದೇಶದಲ್ಲಿ 14 ಸಾವಿರ ಹೊಸ ಕೋವಿಡ್​ ಸೋಂಕಿತರು ಪತ್ತೆ, 41 ಮಂದಿ ಸಾವು

author img

By

Published : Aug 14, 2022, 10:25 AM IST

ಕೋವಿಡ್​
COVID19

ಭಾರತದಲ್ಲಿ ಕಳೆದೊಂದು ದಿನದಲ್ಲಿ ಕಂಡುಬಂದ ಕೋವಿಡ್ 19 ಪ್ರಕರಣಗಳ ಮಾಹಿತಿ ಇಲ್ಲಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,092 ಹೊಸ ಕೋವಿಡ್‌ ಕೇಸ್​​​ಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,16,861ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದೊಂದು ದಿನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 5,27,037 ಕ್ಕೆ ತಲುಪಿದೆ. ಈವರೆಗೆ 4,36,09,566 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಶೇ.98.54 ರಷ್ಟಿದ್ದರೆ, ಸಕ್ರಿಯ ಪ್ರಕರಣ ದರ ಶೇ. 0.26 ಇದೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ.

ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 207.99 ಕೋಟಿ ಲಸಿಕಾ ಡೋಸ್​ ನೀಡಲಾಗಿದ್ದು, ನಿನ್ನೆ 28,01,457 ಲಕ್ಷ ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ. ದೆಹಲಿಯಲ್ಲಿ ನಿನ್ನೆ 2,031 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ. ಈಗಾಗಲೇ ಅವರು ಪ್ರತ್ಯೇಕವಾಗಿ ಐಸೋಲೇಟ್​ ಆಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಏಮ್ಸ್​ನ ವೈದ್ಯಕೀಯ ವಿದ್ಯಾರ್ಥಿ ಸಾವು.. ಸಂಸ್ಥೆ ವಿರುದ್ಧ ಸಹಪಾಠಿಗಳಿಂದ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.