ETV Bharat / bharat

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಎನ್​ಸಿಪಿ ನಾಯಕ ಶರದ್​ ಪವಾರ್ : ಇಂಡಿಯಾ ಒಕ್ಕೂಟ ಅಸಮಾಧಾನ​

author img

By

Published : Jul 29, 2023, 10:13 AM IST

ಎನ್​ಸಿಪಿ ನಾಯಕ ಶರದ್ ಪವಾರ್ ಅವರು ಪುಣೆಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇಂಡಿಯಾ ಒಕ್ಕೂಟದ ಅಸಮಾಧಾನಕ್ಕೆ ಕಾರಣವಾಗಿದೆ.

india-leaders-angry-as-sharad-pawar-set-to-share-stage-with-pm-modi-in-pune
ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಎನ್​ಸಿಪಿ ನಾಯಕ ಶರದ್​ ಪವಾರ್ : ಇಂಡಿಯಾ ಒಕ್ಕೂಟ ಅಸಮಾಧಾನ​

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿ, ಕಾಂಗ್ರೆಸ್​ ಈಗಾಗಲೇ ಭರದ ಸಿದ್ಧತೆಯನ್ನು ನಡೆಸುತ್ತಿದೆ. ಕಾಂಗ್ರೆಸ್​ ನೇತೃತ್ವದ ಇಂಡಿಯಾ ಒಕ್ಕೂಟ ( ಇಂಡಿಯನ್​ ನ್ಯಾಷನಲ್​ ಡೆವಲಪ್​ಮೆಂಟ್​ ಇನ್​​ಕ್ಲೂಸಿವ್​ ಅಲಯನ್ಸ್​) ಬಿಜೆಪಿಯನ್ನು ಸೋಲಿಸಲು ರಣ ತಂತ್ರ ರೂಪಿಸುತ್ತಿದೆ. ಈಗಾಗಲೇ 26 ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ತೊಡೆ ತಟ್ಟಿದೆ.

ಈಗಾಗಲೇ ಈ ಸಂಬಂಧ ಎರಡು ಸಭೆಗಳನ್ನು ನಡೆಸಿರುವ ಕಾಂಗ್ರೆಸ್​ ತನ್ನ ಮುಂದಿನ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂಬೈನಲ್ಲಿ ಇರಿಸಿಕೊಂಡಿದೆ. ಆಗಸ್ಟ್​ 25-26ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಈ ನಡುವೆ ಆಗಸ್ಟ್​​ 1ರಂದು ಪುಣೆಯಲ್ಲಿ ಆಯೋಜಿಸಿರುವ ಪ್ರಧಾನಿ ಕಾರ್ಯಕ್ರಮದಲ್ಲಿ ಎನ್​ಸಿಪಿ ನಾಯಕ ಶರದ್​ ಪವಾರ್​ ಭಾಗವಹಿಸುತ್ತಿರುವುದು ಇಂಡಿಯಾ ಒಕ್ಕೂಟದ ಅಸಮಾಧಾನಕ್ಕೆ ಕಾರಣವಾಗಿದೆ.

ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಪವಾರ್ : ಆಗಸ್ಟ್​ 1ರಂದು ಮಹಾರಾಷ್ಟ್ರದ ಪುಣೆಯಲ್ಲಿ ತಿಲಕ್ ಸ್ಮಾರಕ್​ ಮಂದಿರ್​ ಟ್ರಸ್ಟ್​​ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಎನ್​ಸಿಪಿ ನಾಯಕ ಶರದ್​ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಶರದ್​ ಪವಾರ್​ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕ ಮಾನ್ಯ ತಿಲಕ್​ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಕಳವಳ ವ್ಯಕ್ತಪಡಿಸಿದೆ.ಈ ಬಗ್ಗೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎನ್​ಸಿಪಿ ನಾಯಕ ಶರದ್​ ಪವಾರ್ ಅವರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಒತ್ತಾಯಿಸಬೇಕೆಂದು ಆಗ್ರಹಿಸಲಾಗಿದೆ.

ಇಂಡಿಯಾ ಒಕ್ಕೂಟದ ಮೇಲೆ ವ್ಯತಿರಿಕ್ಷ ಪರಿಣಾಮ: ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರಲ್ಲೊಬ್ಬರಾದ ಶರದ್​ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಒಕ್ಕೂಟದ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. 2024 ಚುನಾವಣೆ ಹಿನ್ನಲೆ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಸಮಾನಮನಸ್ಕ ವಿರೋಧ ಪಕ್ಷಗಳು ಒಗ್ಗೂಡುತ್ತಿರುವಾಗ ಪ್ರಧಾನಿ ಮೋದಿ ಜೊತೆಗೆ ಶರದ್​ ಪವಾರ್​ ವೇದಿಕೆ ಹಂಚಿಕೊಳ್ಳುವುದು ಒಕ್ಕೂಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಜನರಿಗೆ ಕೆಟ್ಟ ಸಂದೇಶ ರವಾನಿಸದಂತಾಗುತ್ತದೆ. ಈ ಒಕ್ಕೂಟವನ್ನು ಬಹಳ ಶ್ರಮದಿಂದ ಕಟ್ಟಲಾಗಿದೆ. ಇಂಡಿಯಾ ಒಕ್ಕೂಟವನ್ನು ಈಸ್ಟ್​ ಇಂಡಿಯಾ ಕಂಪೆನಿ ಹಾಗೂ ಉಗ್ರ ಸಂಘಟನೆ ಇಂಡಿಯನ್​ ಮುಜಾಹಿದ್ದೀನ್​ ಜೊತೆ ಹೋಲಿಕೆ ಮಾಡಿರುವ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳವುದು ಸರಿಯಲ್ಲ ಎಂದು ಹೇಳಿದೆ.

ಮುಂಬೈನಲ್ಲಿ ಇಂಡಿಯಾ ಒಕ್ಕೂಟ ಮೂರನೇ ಸಭೆ : ಇಂಡಿಯಾ ಒಕ್ಕೂಟದ ಮೂರನೇ ಸಭೆಯು ಮುಂಬೈನಲ್ಲಿ ಆಗಸ್ಟ್ 25 ಮತ್ತು 26 ರಂದು ನಡೆಯಲಿದೆ. ಶಿವಸೇನೆ (ಯುಬಿಟಿ) ಮತ್ತು ಪವಾರ್ ನೇತೃತ್ವದ ಎನ್‌ಸಿಪಿ ಸಭೆಯನ್ನು ಆಯೋಜಿಸಿದೆ. ಇದಕ್ಕೂ ಮೊದಲು ಬಿಹಾರದ ಪಾಟ್ನಾದಲ್ಲಿ ಮೊದಲ ಸಭೆ ಮತ್ತು ಬೆಂಗಳೂರಿನಲ್ಲಿ ಎರಡನೇ ಸಭೆ ನಡೆದಿತ್ತು. ಎರಡನೇ ಸಭೆಯಲ್ಲಿ ಕಾಂಗ್ರೆಸ್​ ನೇತೃತ್ವದ ಒಕ್ಕೂಟದ ಹೆಸರನ್ನು ಇಂಡಿಯಾ ಎಂದು ಬದಲಾಯಿಸಲಾಗಿತ್ತು.

ಇದನ್ನೂ ಓದಿ : ಆಗಸ್ಟ್ 25 - 26ಕ್ಕೆ ಮುಂಬೈನಲ್ಲಿ ನಡೆಯಲಿದೆ 'ಇಂಡಿಯಾ'ದ ಮೂರನೇ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.