ETV Bharat / bharat

ದೇಶದಲ್ಲಿ 2.59 ಲಕ್ಷ ಹೊಸ ಕೊರೊನಾ ಸೋಂಕಿತರು ಪತ್ತೆ; ಗುಣಮುಖರ ಸಂಖ್ಯೆಯಲ್ಲಿ ಹೆಚ್ಚಳ

author img

By

Published : May 21, 2021, 9:59 AM IST

india-reports-259-591-new-covid19-cases
ದೇಶದಲ್ಲಿ 2,59,591 ಹೊಸ ಕೊರೊನಾ ಪ್ರಕರಣ ಪತ್ತೆ

ಕಳೆದ 24 ಗಂಟೆಯಲ್ಲಿ ದಾಖಲಾದ ಪ್ರಕರಣಗಳೊಂದಿಗೆ ದೇಶದಲ್ಲಿ ಈವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,60,31,991ಕ್ಕೆ ಏರಿದೆ. ಇದೇ ವೇಳೆ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ.

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,59,591 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 4,209 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 3,57,295 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿ-ಅಂಶ:

ದೇಶದಲ್ಲಿ ಈವರೆಗೆ ಒಟ್ಟು 2,60,31,991 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ. 2,91,331 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 30,27,925 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಮೇ 20 ರ ವರೆಗೆ 32,44,17,870 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 20,61,683 ಜನರ ಸ್ಯಾಂಪಲ್​​​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ ತಿಳಿಸಿದೆ.

ಲಸಿಕೆ ವಿತರಣೆ:

ದೇಶಾದ್ಯಂತ ಇಲ್ಲಿಯವರೆಗೆ 19,18,79,503 ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.