ETV Bharat / bharat

ಕಳೆದ 24 ಗಂಟೆಯಲ್ಲಿ 2,95,041 ಜನರಿಗೆ ಸೋಂಕು; ಎರಡು ಸಾವಿರಕ್ಕೂ ಹೆಚ್ಚು ಮಂದಿ ಸಾವು‌

author img

By

Published : Apr 21, 2021, 10:13 AM IST

India reports 2,95,041 new COVID19 cases
ಕಳೆದ 24 ಗಂಟೆಯಲ್ಲಿ 2,95,04 ಜನರಿಗೆ ಸೋಂಕು

ಕಳೆದ 24 ಗಂಟೆಯಲ್ಲಿ ದಾಖಲಾದ ಪ್ರಕರಣಗಳೊಂದಿಗೆ ದೇಶದಲ್ಲಿ ಈವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,56,16,130 ಕ್ಕೆ ಏರಿದೆ.

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,95,041 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,023 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 1,67,457 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿಅಂಶ:

ದೇಶದಲ್ಲಿ ಈವರೆಗೆ ಒಟ್ಟು 1,56,16,130 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,32,76,039 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,82,553 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 21,57,538 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಇದನ್ನೂ ಓದಿ: ನಾಳೆಯಿಂದ ಸುಪ್ರೀಂಕೋರ್ಟ್‌ನಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ

ಕೋವಿಡ್ ಪರೀಕ್ಷೆ:

ಏಪ್ರಿಲ್​ 20 ರವರೆಗೆ 27,10,53,392 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 16,39,357 ಸ್ಯಾಂಪಲ್ಸ್​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ಲಸಿಕೆ ವಿತರಣೆ:

ದೇಶಾದ್ಯಂತ ಇಲ್ಲಿಯವರೆಗೆ 13,01,19,310 ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.