India Covid Report: ನಿನ್ನೆಯೂ ದೇಶದಲ್ಲಿ 465 ಮಂದಿ ಕೋವಿಡ್​ಗೆ ಬಲಿ.. ಮೃತರ ಸಂಖ್ಯೆ 4.67 ಲಕ್ಷಕ್ಕೆ ಏರಿಕೆ

author img

By

Published : Nov 27, 2021, 2:15 PM IST

ಭಾರತದ ಕೋವಿಡ್​ ವರದಿ

ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 3,45,63,749 ಜನರಿಗೆ ಕೊರೊನಾ ವೈರಸ್​​​ ಅಂಟಿದ್ದು, ಇವರಲ್ಲಿ 3,39,88,797 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,318 ಮಂದಿ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದಾರೆ. ಹೊಸ ಕೇಸ್​ಗಳ ಸಂಖ್ಯೆಯಲ್ಲೇನೋ ಇಳಿಕೆ ಕಾಣುತ್ತಿದೆ. ಆದರೆ, ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಶುಕ್ರವಾರ ಒಂದೇ ದಿನ 465 ಜನರು ಸೋಂಕಿಗೆ ಬಲಿಯಾಗಿದ್ದು, ಕೋವಿಡ್​ ಮೃತರ ಸಂಖ್ಯೆ 4,67,933ಕ್ಕೆ ಹೆಚ್ಚಳವಾಗಿದೆ.

ಇಲ್ಲಿಯವರೆಗೆ ಒಟ್ಟು 3,45,63,749 ಜನರಿಗೆ ವೈರಸ್​​​ ಅಂಟಿದೆ. ಇವರಲ್ಲಿ 3,39,88,797 ಮಂದಿ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.98.34ಕ್ಕೆ ಹೆಚ್ಚಳವಾಗಿದೆ. 541 ದಿನಗಳ ಬಳಿಕ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 1,07,019ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

121.06 ಕೋಟಿ ಡೋಸ್​ ವ್ಯಾಕ್ಸಿನೇಷನ್​

ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 121.06 ಕೋಟಿಗೂ ಅಧಿಕ ಡೋಸ್ (1,21,06,58,262)​ ವ್ಯಾಕ್ಸಿನ್​ ನೀಡಲಾಗಿದೆ. ನಿನ್ನೆ ಒಂದೇ ದಿನ 73,58,017 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ರೂಪಾಂತರಿ 'ಒಮಿಕ್ರೋನ್' ಆತಂಕ: ದಕ್ಷಿಣ ಆಫ್ರಿಕಾ ಸೇರಿ ಈ ದೇಶಗಳಿಗೆ ಪ್ರವೇಶ ನಿಷೇಧ

ಹೊಸ ರೂಪಾಂತರಿ

ದಕ್ಷಿಣ ಆಫ್ರಿಕಾದಲ್ಲಿ ಮತ್ತೊಂದು ಬಗೆಯ ಕೊರೊನಾ ರೂಪಾಂತರಿ ಪತ್ತೆಯಾಗಿದ್ದು, ವಿಶ್ವಸಂಸ್ಥೆ ಅದಕ್ಕೆ 'ಒಮಿಕ್ರೋನ್' ಎಂದು ಹೆಸರಿಟ್ಟಿದೆ. ಇದು ಕೋವಿಡ್​ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತವೆ. ಇದರ ಬೆನ್ನಲ್ಲೇ ದಕ್ಷಿಣಾ ಆಫ್ರಿಕಾದಿಂದ ಮುಂಬೈಗೆ ಬಂದಿಳಿಯುವ ಪ್ರಯಾಣಿಕರಿಗೆ ಕ್ವಾರಂಟೈನ್​ ಕಡ್ಡಾಯ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.