ETV Bharat / bharat

ಸ್ವಾತಂತ್ರ್ಯದ ಅಮೃತ ಮಹೋತ್ಸವ: 12,000 ಅಡಿ ಎತ್ತರದಲ್ಲಿ 'ತಿರಂಗ' ಹಾರಿಸಿದ ಯೋಧರು

author img

By

Published : Jul 27, 2022, 11:12 AM IST

ಕೋವಿಡ್‌ ಹಿನ್ನೆಲೆಯಲ್ಲಿ ಕಳೆದೆರಡು ವರ್ಷದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿರಲಿಲ್ಲ. ಆದರೆ, ಈ ವರ್ಷ ಸ್ವಾತಂತ್ರ್ಯದ ಅಮೃತ ಸ್ವತಂತ್ರೋತ್ಸವನ್ನು ಅದ್ಧೂರಿಯಾಗಿ ನೆರೆವೇರಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದರ ನಡುವೆ 12,000 ಅಡಿ ಎತ್ತರದಲ್ಲಿ 'ತಿರಂಗ' ಧ್ವಜ ಹಾರಿಸುವ ಮೂಲಕ ನಮ್ಮ ಹೆಮ್ಮೆಯ ಸೈನಿಕರು ದೇಶಪ್ರೇಮ ಮೆರೆದರು.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್
ITBP troops

ಲಡಾಖ್: 75ನೇ ಸ್ವಾತಂತ್ರ್ಯ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.‌ ಈ ಹಿನ್ನೆಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರು 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಣೆಯ ದೃಷ್ಟಿಯಿಂದ ಸಮುದ್ರದಿಂದ 12,000 ಅಡಿ ಎತ್ತರದಲ್ಲಿ 'ತ್ರಿವರ್ಣ' ಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತದೆ. ಈ ಶುಭ ಸಮಯವನ್ನು ಆಜಾದಿ ಕಾ ಅಮೃತ್ ಮಹೋತ್ಸವ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿದೆ. ಈ ಕುರಿತು ಈಗಾಗಲೇ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಇದೀಗ ನಮ್ಮ ಹೆಮ್ಮೆಯ ಯೋಧರು ಸಹ ಅಮೃತ್ ಮಹೋತ್ಸವದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಎಲ್ಲಾ ನಾಗರಿಕರು ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಧ್ವಜಾರೋಹಣ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 'ಹರ್​ ಘರ್​ ತಿರಂಗಾ'.. ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರ ಧ್ವಜ ಹಾರಿಸಲು ಕ್ರಮ: ಸಿಎಂ

ಮನೆಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಪ್ರೇಮ, ಸ್ವಾತಂತ್ರ್ಯವನ್ನು ತಂದುಕೊಟ್ಟ ನಮ್ಮ ಹಿರಿಯರ ತ್ಯಾಗ, ಬಲಿದಾನವನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರು ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣ ಆಚರಣೆಯಲ್ಲಿ ಸಂತಸದಿಂದ ಭಾಗಿಯಾಗಿ ಎಂದು ಸೈನಿಕರು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ:'ಆಜಾದಿ ಕಾ ಅಮೃತ್ ಮಹೋತ್ಸವ'ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.