ETV Bharat / bharat

ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಪದವೀಧರರಿಗೆ ಅವಕಾಶ

author img

By ETV Bharat Karnataka Team

Published : Dec 22, 2023, 5:59 PM IST

ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಒಟ್ಟು 119 ಗ್ರೂಪ್​ ಸಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

junior and senior assistant Recruitment in AAI
junior and senior assistant Recruitment in AAI

ಬೆಂಗಳೂರು: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಪುದುಚೇರಿ ಮತ್ತು ಲಕ್ಷದ್ವೀಪ​ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಧಿಸೂಚನೆ
ಅಧಿಸೂಚನೆ

ಹುದ್ದೆಗಳ ವಿವರ:

  • ಕಿರಿಯ ಸಹಾಯಕರು (ಅಗ್ನಿ ಸೇವೆ) - 73
  • ಕಿರಿಯ ಸಹಾಯಕರು (ಆಫೀಸ್)​ - 2
  • ಹಿರಿಯ ಸಹಾಯಕರು (ಎಲೆಕ್ಟ್ರಾನಿಕ್ಸ್​​) - 25
  • ಹಿರಿಯ ಸಹಾಯಕರು (ಅಕೌಂಟ್ಸ್​​) -19

ವಿದ್ಯಾರ್ಹತೆ: ಕಿರಿಯ ಸಹಾಯಕರು (ಅಗ್ನಿ ಸೇವೆ) ಹುದ್ದೆಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ, ಪಿಯುಸಿ ಉತ್ತೀರ್ಣರಾಗಿರಬೇಕು. ಕಿರಿಯ ಸಹಾಯಕರು (ಆಫೀಸ್​) ಯಾವುದೇ ವಿಷಯದಲ್ಲಿ ಪದವಿ. ಹಿರಿಯ ಸಹಾಯಕರು (ಎಲೆಕ್ಟ್ರಾನಿಕ್ಸ್​​) ಹುದ್ದೆಗಳಿಗೆ ಎಲೆಕ್ಟ್ರಾನಿಕ್ಸ್​​. ಟೆಲಿಕಮ್ಯೂನಿಕೇಷನ್​, ರೇಡಿಯೋ ಇಂಜಿನಿಯರಿಂಗ್​ ಡಿಪ್ಲೊಮಾ ಪದವಿ ಮತ್ತು ಹಿರಿಯ ಸಹಾಯಕರು (ಅಕೌಂಟ್ಸ್​​) ವಾಣಿಜ್ಯ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಡ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕದೊಂದಿಗೆ ಅರ್ಜಿ ಭರ್ತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​, ಲಿಖಿತ ಪರೀಕ್ಷೆ ಮತ್ತು ಸಂದರ್ಶನ.

ಡಿಸೆಂಬರ್​ 27ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 26. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ aai.aero ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ವಿಜಯನಗರ ಗ್ರಾಮ ಪಂಚಾಯಿತಿ ನೇಮಕಾತಿ: 22 ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.