ETV Bharat / bharat

ಕಾರ್ತಿ ಚಿದಂಬರಂ ಮನೆ, ಕಚೇರಿ ಮೇಲೆ ಸಿಬಿಐ ದಾಳಿ: ಅವರಿಗೇನು ಸಿಗಲಿಲ್ಲ ಎಂದ ಕಾಂಗ್ರೆಸ್​ ನಾಯಕ!

author img

By

Published : May 17, 2022, 2:28 PM IST

ಲಂಚ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಮಹತ್ವದ ದಾಖಲೆ ಕಲೆ ಹಾಕುತ್ತಿದೆ.

Karti Chidambaram faces CBI raids, CBI raids for bribes for visas to Chinese workers, congress leader Karti Chidambaram news, ಸಿಬಿಐ ದಾಳಿಗಳನ್ನು ಎದುರಿಸುತ್ತಿರುವ ಕಾರ್ತಿ ಚಿದಂಬರಂ, ಚೀನಾದ ಉದ್ಯೋಗಿಗಳಿಗೆ ವೀಸಾಗಾಗಿ ಲಂಚದ ಬೇಡಿಕೆ ಸಂಬಂಧ ಸಿಬಿಐ ದಾಳಿ, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಸುದ್ದಿ,
ಕರ್ನಾಟಕ ಸೇರಿ ಕಾರ್ತಿ ಚಿದಂಬರಂ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ನವದೆಹಲಿ: ಬೆಳ್ಳಂಬೆಳಗ್ಗೆ ಕಾಂಗ್ರೆಸ್​ ನಾಯಕ ಪಿ.ಚಿದಂಬರಂ ಮಗ ಕಾರ್ತಿ ಚಿದಂಬರಂಗೆ ಸಿಬಿಐ ಶಾಕ್​ ನೀಡಿದೆ. ಚೀನಾ ಪ್ರಜೆಗಳಿಗೆ ವೀಸಾ ಕೊಡಿಸಲು 50 ಲಕ್ಷ ರೂ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಶಿವಗಂಗೆ ಸಂಸದ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಒಂಬತ್ತು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

  • This morning, a CBI team searched my residence at Chennai and my official residence at Delhi. The team showed me a FIR in which I am not named as an accused.

    The search team found nothing and seized nothing.

    I may point out that the timing of the search is interesting.

    — P. Chidambaram (@PChidambaram_IN) May 17, 2022 " class="align-text-top noRightClick twitterSection" data=" ">

ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ತಲ್ವಾಂಡಿ ಸಾಬೋ ಪವರ್ ಲಿಮಿಟೆಡ್ ಯೋಜನೆಗಾಗಿ ಚೀನಾದ ಉದ್ಯೋಗಿಗಳಿಗೆ ವೀಸಾ ಒದಗಿಸಲು 50 ಲಕ್ಷ ರೂ ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಾರ್ತಿ ಚಿದಂಬರಂ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.