ETV Bharat / bharat

'ಜೈಲರ್' ಖಳನಾಯಕನ​​ ರಿಯಲ್​ ಬಂಧನ: ಕಾರಣ ತಿಳಿಸಿದ ಪೊಲೀಸ್​ ಅಧಿಕಾರಿಗಳು..​

author img

By PTI

Published : Oct 25, 2023, 7:21 AM IST

ಜೈಲರ್​ ಚಿತ್ರದ ಖಳನಾಯಕ ವಿನಾಯಕನ್​ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

'ಜೈಲರ್' ಖಳನಾಯಕನ​​ ರಿಯಲ್​ ಬಂಧನ
'ಜೈಲರ್' ಖಳನಾಯಕನ​​ ರಿಯಲ್​ ಬಂಧನ

ಕೊಚ್ಚಿ (ಕೇರಳ): ಜೈಲರ್​ ಚಿತ್ರದಲ್ಲಿ ವಿಲನ್​ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ವಿನಾಯಕನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ ಆರೋಪದಡಿ ​ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಕೇರಳದ ಪೊಲೀಸ್​ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿನಾಯಕನ್ ವಾಸವಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ತಮಗೆ ತೊಂದರೆ ನೀಡುತ್ತಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ನಿನ್ನೆ ಸಂಜೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಗೆ ಅವರನ್ನು ಕರೆಸಲಾಗಿತ್ತು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ವಿನಾಯಕನ್​ ತಾಳ್ಮೆ ಕಳೆದುಕೊಂಡು ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಪೊಲೀಸ್​ ಅಧಿಕಾರಿಗಳು ನಟನನ್ನು ಬಂಧಿಸಿದ್ದಾರೆ. ಕಾನೂನಿನ ಪ್ರಕಾರ ಬಂಧನದ ಬಳಿಕ ನಟನನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವುದಾಗಿ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವೈದ್ಯಕೀಯ ಪರೀಕ್ಷೆಯ ನಂತರ ಆಸ್ಪತ್ರೆಯಿಂದ ಪೊಲೀಸರೊಂದಿಗೆ ಹೊರಡುತ್ತಿದ್ದ ವಿನಾಯಕನ್ ಅವರನ್ನು ಪೊಲೀಸ್ ಠಾಣೆಗೆ ಬರಲು ಕಾರಣವೇನು ಎಂದು ಮಾಧ್ಯಮದವರು ಕೇಳಿದಾಗ, ತನ್ನನ್ನು ಏತಕ್ಕೆ ಬಂಧಿಸಲಾಗಿದೆ ಎಂದು ತಿಳಿದಿಲ್ಲ. ನಾನು ದೂರು ನೀಡಲು ಪೊಲೀಸ್​ ಠಾಣೆಗೆ ಬಂದಿದ್ದೆ. ಪೊಲೀಸರು ಏತಕ್ಕಾಗಿ ನನ್ನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಅವರನ್ನೆ ಕೇಳಿ ಎಂದು ವಿನಾಯಕನ್​ ಹೇಳಿದರು.

ಇದೇ ವೇಳೆ ನಟನ ಜೊತೆಗಿದ್ದ ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಟ ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದರು. ಇದೇ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

ಯಾರು ಈ ವಿನಾಯಕನ್​: ವಿನಾಯಕನ್​ ಅವರು ಮಲಯಾಳಂ ಚಿತ್ರರಂಗದ ಖ್ಯಾತ ನಟ. ತಿಮಿರು ಮತ್ತು ಮಾರಿಯನ್​ ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಪರಿಚಿತರಾದವರು ಈ ವಿನಾಯಕನ್​. ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆ ಸಾಬೀತುಪಡಿಸುವುದರ ಜೊತೆಗೆ ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಸಹ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಭಾರತೀಯ ಚಿತ್ರರಂಗದಲ್ಲಿ ಹಲ್​ಚಲ್​ ಸೃಷ್ಟಿಸಿದ ಜೈಲರ್​ ಸಿನಿಮಾದಲ್ಲಿ ನಟಿಸುವ ಎಲ್ಲ ಚಿತ್ರರಂಗದ ಗಮನ ಸೆಳೆದಿದ್ದಾರೆ ಈ ವಿನಾಯಕನ್​. ವಿನಾಯಕನ್​ ಅವರ ವಿಲ್ಲನ್​ ಪಾತ್ರ ಎಲ್ಲೆಡೆ ಚರ್ಚೆಯಾಗುತ್ತಿದೆ.

ನಟ ವಿನಾಯಕನ್​ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ನಟಿಸುತ್ತಾರೆ. ಕಳೆದ ಆಗಸ್ಟ್​​ನಲ್ಲಿ ತೆರೆಕಂಡ ಸೂಪರ್​ಸ್ಟಾರ್​ ರಜನಿಕಾಂತ್ ಅಭಿನಯದ 'ಜೈಲರ್' ಚಿತ್ರದಲ್ಲಿ ವಿನಾಯಕನ್ ಖಳನಾಯಕನಾಗಿ ನಟಿಸಿದ್ದರು. ವರ್ಮನ ಪಾತ್ರದಲ್ಲಿ ಮಿಂಚಿದ್ದರು. ವಿನಾಯಕನ್​ ತಮಿಳಿನ ತಿಮಿರು, ಮರಿಯಾನ್ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಆಕಸ್ಮಿಕವಾಗಿ ಅಜಿತ್​ ದೋವಲ್ ಭೇಟಿಯಾದ ಕಂಗನಾ ರಣಾವತ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.