ಸರಿಯಾದ ಕೆಲಸವಿಲ್ಲವೆಂದು ಖಿನ್ನತೆ.. ಗಗನಸಖಿ ಆತ್ಮಹತ್ಯೆ

author img

By

Published : Jan 22, 2023, 5:21 PM IST

ಸರಿಯಾದ ಕೆಲಸವಿಲ್ಲವೆಂದು 27 ವರ್ಷದ ಗಗನಸಖಿ ಆತ್ಮಹತ್ಯೆ

ಸರಿಯಾದ ಕೆಲಸವಿಲ್ಲವೆಂದು ಮಾನಸಿಕ ವೇದನೆ - ಗಗನಸಖಿ ಆತ್ಮಹತ್ಯೆ - ಕೋಲ್ಕತ್ತಾದಲ್ಲಿ ಘಟನೆ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 27 ವರ್ಷದ ಗಗನಸಖಿಯೊಬ್ಬರು ಶನಿವಾರ ಕೋಲ್ಕತ್ತಾದಲ್ಲಿ ಕಟ್ಟಡದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಯಮಿತವಾದ ಉದ್ಯೋಗ ಇಲ್ಲದ ಕಾರಣದಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದ ಗಗನಸಖಿ ರಸ್ತೆಯ ಮೇಲೆ ಬಿದ್ದಿದ್ದಾರೆ. ತೀವ್ರ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಎಸ್‌ಎಸ್‌ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ದೆಬೋಪ್ರಿಯಾ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ಕೋಲ್ಕತ್ತಾದ ಪ್ರಗತಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರೋಪಾಲಿಟನ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯ ನಿವಾಸಿಯಾಗಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅವರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ವಿಚಾರಣೆ ಆರಂಭಿಸಿದರು. ಕಳೆದ ಎರಡು ವರ್ಷಗಳಿಂದ ನಿಯಮಿತ ಕೆಲಸವಿಲ್ಲದ ಕಾರಣ ಅವರು ಖಿನ್ನತೆ ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವಿಚಾರಣೆ ವೇಳೆ ಸಂತ್ರಸ್ತೆಯ ಕುಟುಂಬಸ್ಥರು ಹೇಳಿದ್ದಾರೆ ಎಂದು ಪೊಲೀಸರು ಪ್ರಕರಣದ ಕುರಿತು ವಿವರಿಸಿದ್ದಾರೆ. ಕೋಲ್ಕತ್ತಾದ ಪ್ರಗತಿ ಮೈದಾನ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.

ತಿರುವನಂತಪುರದಲ್ಲಿ ಮಗನ ಬಂಧನದಿಂದ ನೊಂದ ಮಹಿಳೆ ಆತ್ಮಹತ್ಯೆ: 55 ವರ್ಷದ ಮಹಿಳೆಯೊಬ್ಬರು ಶನಿವಾರ ಮುಂಜಾನೆ ತಿರುವನಂತಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದಕ ವಸ್ತುವನ್ನು ಹೊಂದಿರುವ ಕಾರಣಕ್ಕಾಗಿ ಅವರ ಮಗನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಒಂದು ದಿನದ ನಂತರ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕಜಕುಟ್ಟೋಂ ಸಮೀಪದ ಸಂಥಿಪುರಂನ ಗ್ರೇಸ್ ಕ್ಲೆಮೆಂಟ್ ಎಂದು ಗುರುತಿಸಲಾಗಿದೆ. ಅವರ ಮಗ ಶೈನೋ 4 ಗ್ರಾಂ ಡ್ರಗ್ ಅನ್ನು ಇಟ್ಟುಕೊಂಡಿದ್ದ. ಆತ ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಶೈನೋ ತಾಯಿ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಂಬಂಧಿಕರು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಳ್ಳು ಕೇಸ್​ನಿಂದ ನೊಂದ ವ್ಯಕ್ತಿ ಆತ್ಮಹತ್ಯೆ: ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಿರುವನಂತಪುರಂ ಬಳಿಯ ವಿಝಿಂಜಂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ವ್ಯಕ್ತಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಡುಕ್ಕಿ ಪೊಲೀಸರು ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿ ತಿರುವನಂತಪುರ ವೆಂಗನೂರು ಮೂಲದ ಅಮಲಜಿತ್ (28) ಬಾರದಲೋಕಕ್ಕೆ ತೆರಳಿದ್ದಾನೆ.

ತಾನು ಮಾಡದ ಅಪರಾಧಕ್ಕಾಗಿ 49 ದಿನಗಳ ಕಾಲ ಜೈಲಿನಲ್ಲಿದ್ದೆ. ತನ್ನನ್ನು 17 ದಿನಗಳ ಕಾಲ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿತ್ತು ಎಂದು ಅಮಲಜಿತ್ ಆರೋಪಿಸಿದ್ದಾರೆ. ಕಾಲ್ ರೆಕಾರ್ಡಿಂಗ್ ಅನ್ನು ಎಲ್ಲರಿಗೂ ಕಳುಹಿಸಿ ನಂತರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಮಲಜಿತ್ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ಹೇಳಿದ್ದಾನೆ. ಆತನ ರಕ್ಷಣೆಗೆ ವೆಂಗನೂರು ಪೊಲೀಸರು ತೆರಳಿದ್ದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ತಲುಪುವಷ್ಟರಲ್ಲಿ ಆತ ತನ್ನ ಪ್ರಾಣ ಕಳೆದುಕೊಂಡಿದ್ದ.

ಇದನ್ನೂ ಓದಿ: ಕೊಪ್ಪಳದಲ್ಲಿ ಯುವಕ - ಬಾಲಕಿ ಸಾವು, ಘಟನೆ ಬಗ್ಗೆ ಎಸ್ಪಿ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.