ETV Bharat / bharat

ಗೋವಾ ಚುನಾವಣೆ: ಬಿರುಸಿನ ಪ್ರಚಾರ ಕೈಗೊಂಡು ಬಿಜೆಪಿಗೆ ಸೋಲುಣಿಸಿ; ಕೈ ನಾಯಕರಿಗೆ ರಾಗಾ ಕರೆ

author img

By

Published : Sep 25, 2021, 5:22 PM IST

ಬಿರುಸಿನ ಪ್ರಚಾರ ಕೈಗೊಂಡು ಬಿಜೆಪಿ ಪಕ್ಷದ ಸೋಲನ್ನು ಖಚಿತಪಡಿಸಿಕೊಳ್ಳುವಂತೆ ಕೈ ನಾಯಕರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

Rahul Gandhi
Rahul Gandhi

ಪಣಜಿ (ಗೋವಾ): ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಬಿರುಸಿನ ಪ್ರಚಾರ ಕೈಗೊಂಡು ಬಿಜೆಪಿ ಪಕ್ಷದ ಸೋಲನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿಯಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್​ನ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ದಿಗಂಬರ್ ಕಾಮತ್ ಭಾಗವಹಿಸಿದ್ದರು.

ಇದನ್ನೂ ಓದಿ: ಪಂಜಾಬ್‌ ಸಿಎಂ ಚನ್ನಿ ಸಂಪುಟಕ್ಕೆ 7 ಮಂದಿ ಹೊಸಬರು ; ಐವರಿಗೆ ಕೊಕ್‌!

ನಮ್ಮ ನಾಯಕ ರಾಹುಲ್ ಗಾಂಧಿ ಅವರು ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಆಕಾಂಕ್ಷೆಗಳನ್ನು ಪೂರೈಸಬೇಕು ಮತ್ತು ಗೋವಾ ಜನರ ಭಾವನೆಗಳನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ನಾವು ಟೀಂ-ಬಿಜೆಪಿಯನ್ನು ಸೋಲಿಸುವುದು ಖಚಿತ ಎಂದು ಗುಂಡೂರಾವ್ ತಿಳಿಸಿದ್ದಾರೆ.

2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ರ ಪೈಕಿ 17 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಕೇವಲ 13 ಸ್ಥಾನಗಳನ್ನು ಗೆದ್ದಿತ್ತಾದರೂ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.