EWS ಸುಪ್ರೀಂಕೋರ್ಟ್ ತೀರ್ಪು ಮರುಪರಿಶೀಲನೆಗೆ ಕಾಂಗ್ರೆಸ್​ನಿಂದ ಅರ್ಜಿ

author img

By

Published : Nov 23, 2022, 5:02 PM IST

review-petition-on-ews

ಮುಂದುವರೆದ ಜಾತಿಗಳಲ್ಲಿನ ಆರ್ಥಿಕ ದುರ್ಬಲ ವರ್ಗಕ್ಕೆ ಶೇ 10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲಿಸಲು ಕೋರಿ ಕಾಂಗ್ರೆಸ್​ ಮೇಲ್ಮನವಿ ಸಲ್ಲಿಸಿದೆ.

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ನೀಡಲಾದ ಶೇ 10 ರಷ್ಟು ಮೀಸಲಾತಿಯನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದ ನಿರ್ಧಾರದ ವಿರುದ್ಧ ಕಾಂಗ್ರೆಸ್​​ ಮೇಲ್ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನೀಡಲಾದ ಮೀಸಲಾತಿಯನ್ನು ಊರ್ಜಿತಗೊಳಿಸಿದ್ದ ಸುಪ್ರೀಂಕೋರ್ಟ್​ ತೀರ್ಪನ್ನು ಮತ್ತೊಮ್ಮೆ ಪರಿಶೀಲಿಸಿ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸುಪ್ರೀಂ ತೀರ್ಪಿನ ಹಿನ್ನೆಲೆ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರ್ಕಾರ 2019 ರಲ್ಲಿ ಸಂವಿಧಾನದ 103 ನೇ ಕಲಂ ತಿದ್ದುಪಡಿ ಮಾಡಿ ಶೇ.10 ರಷ್ಟು ಕೇಂದ್ರೀಯ ಸಂಸ್ಥೆಗಳು, ಶಾಲಾ ದಾಖಲಾತಿ, ಉದ್ಯೋಗದಲ್ಲಿ ಮೀಸಲಾತಿ ನೀಡಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.

ವಿಚಾರಣೆ ನಡೆಸಿದ ಸುಪ್ರೀಂನ ಆಗಿನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್​ ನೇತೃತ್ವದ ಐದು ಸದಸ್ಯರುಳ್ಳ ಪೀಠ 3: 2 ಬಹುಮತದಲ್ಲಿ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವುದು ಸಂವಿಧಾನದ ಮೂಲ ರಚನೆಗೆ ಧಕ್ಕೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಸುಪ್ರೀಂಕೋರ್ಟ್​ನ ಈ ತೀರ್ಪನ್ನು ಐತಿಹಾಸಿಕ ಎಂದೇ ಪರಿಗಣಿಸಲಾಗಿದೆ. ಇದನ್ನು ಮೊದಮೊದಲು ಸ್ವಾಗತಿಸಿದ್ದ ಕಾಂಗ್ರೆಸ್​ ಇದೀಗ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯ ಮಾಡಿತ್ತು. ಅದರಂತೆ ಇದೀಗ ಮಧ್ಯಪ್ರದೇಶದ ಕಾಂಗ್ರೆಸ್​ ನಾಯಕ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಓದಿ: ಮುಂದುವರೆದ ಜಾತಿಗಳ ಆರ್ಥಿಕ ದುರ್ಬಲ ವರ್ಗಕ್ಕೆ ಶೇ 10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.