ETV Bharat / bharat

ಭೀಕರ ಸ್ಫೋಟ: 12 ಮಂದಿ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಾಯ

author img

By

Published : Mar 4, 2022, 6:35 AM IST

Updated : Mar 4, 2022, 1:14 PM IST

ಬಿಹಾರದ ಭಾಗಲ್ಪುರದ ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

major-blast-in-bhagalpur
ಭೀಕರ ಸ್ಫೋಟ: ಏಳು ಮಂದಿ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಾಯ

ಭಾಗಲ್ಪುರ( ಬಿಹಾರ): ಮನೆಯೊಂದರಲ್ಲಿ ಭಾರಿ ಸ್ಫೋಟದಿಂದಾಗಿ 12 ಮಂದಿ ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಾಗಲ್ಪುರದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸ್ಫೋಟ ಸಂಭವಿಸಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ.

ತಾತಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್‌ನಲ್ಲಿರುವ ಮನೆಯೊಂದರಲ್ಲಿ 11.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ.

ಬಿಹಾರದಲ್ಲಿ ಭೀಕರ ಸ್ಫೋಟ

ಇದನ್ನು ಓದಿ: ಉತ್ತರ ಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕ, ವ್ಯವಸ್ಥಾಪಕನಿಂದ ಅತ್ಯಾಚಾರ

ಸ್ಫೋಟದ ಶಬ್ದ ಇಡೀ ನಗರಕ್ಕೆ ಕೇಳಿಸಿದ್ದು, ಸ್ಫೋಟದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮನೆಯಲ್ಲಿ ಪಟಾಕಿಗಳ ತಯಾರಿಕೆ ನಡೆಯುತ್ತಿದ್ದು, ಇದೇ ಕಾರಣದಿಂದ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಮೃತರಲ್ಲಿ ಒಂದು ಮಗು ಕೂಡಾ ಇದೆ ಎಂದು ತಿಳಿದುಬಂದಿದ್ದು, ಗಾಯಾಗಳುಗಳನ್ನು ಮತ್ತು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್‌ಎಸ್‌ಪಿ ಮತ್ತು ಡಿಐಜಿ ಕೂಡ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Last Updated : Mar 4, 2022, 1:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.