ETV Bharat / bharat

18 ವರ್ಷದ ಯುವತಿ ಮೇಲೆ ಅತ್ಯಾಚಾರ.. ಅಶ್ಲೀಲ ವಿಡಿಯೋ ಹರಿಬಿಟ್ಟ ಕಾಮುಕನ ಬಂಧನ

author img

By

Published : Jan 29, 2022, 5:01 PM IST

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿ, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯೋರ್ವನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ..

Man rapes 18-year-old
Man rapes 18-year-old

ಹೋಶಿಯಾಪುರ್​​​​​(ಪಂಜಾಬ್​) : 18 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಕಾಮಕನೋರ್ವ ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಪಂಜಾಬ್​​ನ ಹೋಶಿಯಾಪುರ್​​ನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಆರೋಪಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಕೆಲ ತಿಂಗಳಲ್ಲಿ ಪಂಜಾಬ್​​ನ ಹೋಶಿಯಾಪುರ್​ನ ಹಳ್ಳಿವೊಂದರಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಆರೋಪಿಯನ್ನ ಬಂಧನ ಮಾಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಯುವತಿಗೆ ಪರಿಚಿತನಾಗಿದ್ದ ಯುವಕ ಚಬ್ಬೇವಾಲ್​ ಪೊಲೀಸ್ ಠಾಣಾ ಪ್ರದೇಶದಲ್ಲಿ ವಾಸವಾಗಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಯುವತಿ ಮೇಲೆ ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿ ಅದನ್ನ ವೈರಲ್ ಮಾಡಿದ್ದನೆಂದು ಸಬ್‌ ಇನ್ಸ್‌ಪೆಕ್ಟರ್​​ ಹರಪ್ರೇಮ್​​​ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸೇನಾ ಕಂಟೋನ್ಮೆಂಟ್​​ನಲ್ಲೇ ಆತ್ಮಹತ್ಯೆಗೆ ಶರಣಾದ ಯೋಧ.. ಕಾರಣ ನಿಗೂಢ!

ಬಂಧಿತ ಆರೋಪಿಯನ್ನ ವಿಶಾಲ್​ ಚೌಧರಿ ಎಂದು ಗುರುತಿಸಲಾಗಿದೆ. ಯಾವುದೋ ನೆಪ ಹೇಳಿ ಯುವತಿಯನ್ನ ಮನೆಗೆ ಕರೆಯಿಸಿಕೊಂಡಿರುವ ವ್ಯಕ್ತಿ, ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ಪ್ರಜ್ಞೆ ತಪ್ಪಿಸಿದ್ದಾನೆ. ಇದರ ಬೆನ್ನಲ್ಲೇ ಆಕೆಯ ಮೇಲೆ ದುಷ್ಕೃತ್ಯವೆಸಗಿದ್ದು, ಅದರ ವಿಡಿಯೋ ಮೊಬೈಲ್​​ನಲ್ಲಿ ರೆಕಾರ್ಡ್ ಮಾಡಿದ್ದಾನೆ.

ಇದಾದ ಬಳಿಕ ಮೇಲಿಂದ ಮೇಲೆ ಬ್ಲ್ಯಾಕ್‌ಮೇಲ್ ಮಾಡಿರುವ ವಿಶಾಲ್​, ವಿಡಿಯೋ ವೈರಲ್ ಮಾಡುವ ಬೆದರಿಕೆ ಸಹ ಹಾಕಿದ್ದಾನೆ. ಯುವಕನ ಬೇಡಿಕೆಗಳನ್ನ ಪೂರೈಕೆ ಮಾಡಲು ಯುವತಿ ಹಿಂದೇಟು ಹಾಕುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಮಾಡಿದ್ದಾನೆ. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಆರೋಪಿ ಬಂಧನ ಮಾಡಿದ್ದಾರೆ. ಇದೀಗ ಆತನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್​ಗಳ ಅಡಿ ದೂರು ದಾಖಲು ಮಾಡಿಕೊಂಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.