ETV Bharat / bharat

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ: ವಿವಿಧ ರಾಜ್ಯಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರ ಸಭೆ

author img

By

Published : Jan 25, 2022, 10:26 AM IST

ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಆರೋಗ್ಯ ಸಚಿವರೊಂದಿಗೆ ಸಂವಾದ ನಡೆಸಲಿದ್ದಾರೆ.

Mandaviya to hold meeting with health ministers of 9 states, UTs on COVID situation today
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ: ವಿವಿಧ ರಾಜ್ಯಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರ ಸಭೆ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಮಂಗಳವಾರ ಕೋವಿಡ್ ಪರಿಸ್ಥಿತಿ ಕುರಿತು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರಾಖಂಡ, ದೆಹಲಿ, ಲಡಾಖ್, ಉತ್ತರ ಪ್ರದೇಶ ಮತ್ತು ಚಂಡೀಗಢದ ಆರೋಗ್ಯ ಸಚಿವರೊಂದಿಗೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಂವಾದ ನಡೆಸಲಿದ್ದಾರೆ.

ಇದಕ್ಕೂ ಮೊದಲು ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಗೋವಾ ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ದಿಯು ಆರೋಗ್ಯ ಸಚಿವರು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮನ್ಸುಖ್ ಮಾಂಡವೀಯ ಸಂವಾದ ನಡೆಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಇನ್ನು ಫೆಬ್ರವರಿ 15ರ ನಂತರ ಭಾರತದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರದ ಮೂಲಗಳು ಸೋಮವಾರ ಮಾಹಿತಿ ನೀಡಿವೆ. ಈಗಾಗಲೇ ಕೆಲವು ರಾಜ್ಯಗಳು ಮತ್ತು ನಗರಗಳಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 3 ಲಕ್ಷದ ಗಡಿಯಿಂದ ಇಳಿಕೆ ಕಂಡ ಕೊರೊನಾ: ನಿಟ್ಟುಸಿರು ಬಿಟ್ಟ ಭಾರತದ ಜನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.