ETV Bharat / bharat

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಸೇರಿ 24 ಶಿಫಾರಸುಗಳನ್ನು ಸಲ್ಲಿಸಿದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

author img

By

Published : Aug 1, 2023, 9:54 PM IST

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವುದು ಸೇರಿ 24 ಶಿಫಾರಸುಗಳನ್ನು ರಾಷ್ಟ್ರಪತಿಗಳಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಸಲ್ಲಿಸಿದ್ದಾರೆ.

dcw-swati-maliwal-sent-interim-recommendations-to-president-regarding-the-ongoing-violence-in-manipur
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಸೇರಿ 24 ಶಿಫಾರಸುಗಳನ್ನು ಸಲ್ಲಿಸಿದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಸೇರಿ 24 ಅಂಶಗಳನ್ನು ಒಳಗೊಂಡ ಮಧ್ಯಂತರ ಶಿಫಾರಸುಗಳನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದಾರೆ.

ಇತ್ತೀಚೆಗೆ ಸ್ವಾತಿ ಮಲಿವಾಲ್ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು, ಮುಖ್ಯಮಂತ್ರಿ ರಾಜೀನಾಮೆ ಮತ್ತು ಪ್ರಧಾನಿ ಮತ್ತು ಕೇಂದ್ರ ಸಚಿವರು ತಕ್ಷಣದ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ರಾಜ್ಯದಲ್ಲಿ ಶಾಂತಿ ನೆಲೆಸಲು ಸಮಗ್ರ ಕಾರ್ಯತಂತ್ರವನ್ನು ಸಿದ್ಧಪಡಿಸಬೇಕೆಂದು ಶಿಫಾರಸು ಮಾಡಿದ್ದಾರೆ.

ಇದನ್ನೂ ಓದಿ: Manipur violence case: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದ ಸುಪ್ರೀಂ ಕೋರ್ಟ್​​.. ಡಿಜಿಪಿಗೆ ಸಮನ್ಸ್

ಜಾತಿ ಸಂಘರ್ಷದ ಮೂಲ ಕಾರಣಗಳು ಮತ್ತು ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಸರ್ಕಾರದ ಕ್ರಮಗಳು ಮತ್ತು ಲೋಪಗಳನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡವನ್ನು ಸ್ಥಾಪಿಸಬೇಕು. ಕಳೆದ ಮೂರು ತಿಂಗಳಲ್ಲಿ 4000ಕ್ಕೂ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಪಡೆಗಳಿಂದ ಲೂಟಿ ಮಾಡಿದ್ದು, ಪೊಲೀಸ್ ನಿಷ್ಕ್ರಿಯತೆ ಬಗ್ಗೆ ವಿಚಾರಣೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

  • Subsequent to my on-ground visit to the violence hit state of #Manipur, I am sending DCW’s interim recommendations to the Hon’ble President. I interacted with hundreds of people in the state. I hope she will take necessary steps urgently! (1/2) pic.twitter.com/Fnotvqjcss

    — Swati Maliwal (@SwatiJaiHind) August 1, 2023 " class="align-text-top noRightClick twitterSection" data=" ">

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎರಡು ಪ್ರತ್ಯೇಕ ಎಸ್‌ಐಟಿಗಳನ್ನು ಸ್ಥಾಪಿಸಬೇಕು. ಇದರಲ್ಲಿ ಕೊಲೆ, ಕಾಣೆಯಾದ ವ್ಯಕ್ತಿಗಳು ಇತ್ಯಾದಿಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ಒಂದು ಎಸ್​ಐಟಿ ಮೇಲ್ವಿಚಾರಣೆ ಮಾಡಬೇಕು. ಇನ್ನೊಂದು ಎಸ್​ಐಟಿ ತಂಡ ನಿರ್ದಿಷ್ಟವಾಗಿ ಲೈಂಗಿಕ ಕಿರುಕುಳ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು. ಇದಲ್ಲದೆ, ಎಲ್ಲ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು. ರಾಜ್ಯದ ಹೊರಗಿನ ತ್ವರಿತ ನ್ಯಾಯಾಲಯದಲ್ಲಿ ಮೇಲಾಗಿ ದೆಹಲಿಯಲ್ಲಿ ವಿಚಾರಣೆ ನಡೆಸಬೇಕೆಂದು ಎಂದು ಶಿಫಾರಸು ಮಾಡಿದ್ದಾರೆ.

25 ಲಕ್ಷ ಪರಿಹಾರ ನೀಡಬೇಕು: ಸಂತ್ರಸ್ತರಿಗೆ ಪುನರ್ವಸತಿ ನೀಡಬೇಕು. ಅವರಿಗೆ ಸೂಕ್ತ ಸಮಾಲೋಚನೆ, ಕಾನೂನು ನೆರವು, ವಸತಿ, ಭದ್ರತೆ ಮತ್ತು ಜೀವನೋಪಾಯದ ಅವಕಾಶಗಳನ್ನು ಒದಗಿಸಬೇಕು. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಕೂಡಲೇ 25 ಲಕ್ಷ ರೂಪಾಯಿ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಸಹಾಯವಾಣಿಯನ್ನು ಸ್ಥಾಪಿಸಲು ಆಯೋಗ ಶಿಫಾರಸು ಮಾಡಿದೆ. ಸಂಘರ್ಷ ವಲಯಗಳಲ್ಲಿ ದುರ್ಬಲ ಜನರನ್ನು ಅವಮಾನಿಸಲು ಮತ್ತು ಭಯಭೀತಗೊಳಿಸಲು ಲೈಂಗಿಕ ಹಿಂಸೆಯನ್ನು ಸಾಮಾನ್ಯವಾಗಿ ಅಸ್ತ್ರವಾಗಿ ಬಳಸಲಾಗುತ್ತದೆ. ಕಳೆದ ಮೂರು ತಿಂಗಳಲ್ಲಿ ಮಣಿಪುರದಲ್ಲಿ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವುದು ಆತಂಕ ಮೂಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವರದಿ ಮಾಡಲು ಮಹಿಳೆಯರಿಗಾಗಿ ತಕ್ಷಣವೇ ಸಹಾಯವಾಣಿಯನ್ನು ಸ್ಥಾಪಿಸಬೇಕೆಂದು ಹೇಳಿದ್ದಾರೆ.

ಮಕ್ಕಳಿಗೆ ಆನ್‌ಲೈನ್ ತರಗತಿ: ಹಿಂಸಾಚಾರದ ಸಮಯದಲ್ಲಿ ಅನಾಥರಾಗಿರುವ ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಸಹ ಆಯೋಗವು ಕೆಲ ಶಿಫಾರಸುಗಳನ್ನು ಮಾಡಿದೆ. ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗದಂತೆ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಬೇಕು. ಸ್ಥಳಾಂತರಗೊಂಡ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯಬಿದ್ದರೆ ಬೇರೆ ರಾಜ್ಯಗಳಲ್ಲಿರುವ ಕಾಲೇಜುಗಳಲ್ಲಿ ಪ್ರವೇಶ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದೂ ತಿಳಿಸಿದೆ.

ಅಲ್ಲದೇ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ರಾಷ್ಟ್ರಪತಿಗಳನ್ನು ಭೇಟಿ ಮಾಡಲು ಮತ್ತು ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಸಮಯ ಕೋರಿದ್ದಾರೆ.

ಇದನ್ನೂ ಓದಿ: Manipur violence case: ಪ್ರಧಾನಿ ಮೋದಿಗೆ ಪತ್ರ ಬರೆದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ, ಕಠಿಣ ಕ್ರಮಕ್ಕೆ ಆಗ್ರಹ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.