ETV Bharat / bharat

'ಅತ್ತೆಯ ಸೇವಕನಾದ ಪತಿ': ನಿರಂತರ ಕಿರುಕುಳಕ್ಕೆ ನೊಂದು ವಿಡಿಯೋ ಮಾಡಿ ಸಾವಿಗೆ ಶರಣಾದ ಸೊಸೆ

author img

By

Published : Jul 27, 2022, 10:41 AM IST

ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಬರ್ನಾಲಾ ಜಿಲ್ಲೆಯ ತಾಜೋಕೆ ಗ್ರಾಮದಲ್ಲಿ ನಡೆದಿದೆ.

ಮಹಿಳೆ ಆತ್ಮಹತ್ಯೆ
woman committed suicide

ಪಂಜಾಬ್​: ಪತಿಯ ಕುಟುಂಬಸ್ಥರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬರ್ನಾಲಾ ಜಿಲ್ಲೆಯ ತಾಜೋಕೆ ಗ್ರಾಮದಲ್ಲಿ ನಡೆದಿದೆ. ಸಾವಿಗೂ ಮುನ್ನ ಗೃಹಿಣಿ ವಿಡಿಯೋ ಮಾಡಿ ಅತ್ತೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಮನ್‌ದೀಪ್ ಕೌರ್ ಮೃತ ಮಹಿಳೆ. ಈಕೆಯನ್ನು ಹಲವು ವರ್ಷಗಳ ಹಿಂದೆ ತಾಜೋಕೆ ಗ್ರಾಮದ ಬೂಟಾ ಸಿಂಗ್ ಅವರ ಪುತ್ರ ಜೇತ್ ಜೇಥಾನಿ​ಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ 5 ವರ್ಷದ ಮಗುವಿದೆ. ವಿವಾಹವಾದ ನಂತರ ಅತ್ತೆ ನನ್ನ ಪತಿಯನ್ನು ಸೇವಕನಂತೆ ನಡೆಸಿಕೊಳ್ಳುತ್ತಿದ್ದರು. ನನಗೂ ನಿರಂತರ ಕಿರುಕುಳ ನೀಡಿ ಥಳಿಸುತ್ತಿದ್ದರು. ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾನೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮಹಿಳೆ ವಿಡಿಯೋದಲ್ಲಿ ಆಗ್ರಹಿಸಿದ್ದಾರೆ.

ಅಮನ್‌ದೀಪ್ ಕೌರ್ ಜುಲೈ 12 ರಂದು ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ನಂತರ ಆಕೆಯನ್ನು ತಾಪಾದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಡಿಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಆಕೆಯ ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕು ಎಂದು ಮೃತಳ ಪೋಷಕರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಯುವ ಮುಖಂಡನ ಬರ್ಬರ ಕೊಲೆ: ಸುಳ್ಯ, ಕಡಬ, ಪುತ್ತೂರು ತಾಲೂಕು ಬಂದ್‌ಗೆ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.