ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿ ಗಡಿ ದಾಟಿ ಪರಾರಿಯಾಗಿದ್ಧಾರೆ ಎಂದು ವರದಿಯಾಗಿದೆ.
ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಂಡ್‌ಪುರ ರಾಂಪುರ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಏತನ್ಮಧ್ಯೆ, ಆ ಪ್ರದೇಶದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಉಗ್ರರು ಗಡಿ ದಾಟಲು ಯಶಸ್ವಿಯಾದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ನದಿಗೆ ಉರುಳಿ ಬಿದ್ದ ಸೇನಾ ವಾಹನ: 7 ಯೋಧರು ಹುತಾತ್ಮ, 19 ಸೈನಿಕರಿಗೆ ಗಾಯ