ETV Bharat / bharat

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ: IIT ಮದ್ರಾಸ್‌ ಫಸ್ಟ್‌, ಬೆಂಗಳೂರಿನ IISc ಬೆಸ್ಟ್

author img

By

Published : Jul 15, 2022, 12:47 PM IST

ಇಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿ ಬಿಡುಗಡೆಗೊಳಿಸಿದರು.

Ministry of Education
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ನವದೆಹಲಿ: ಕೇಂದ್ರ ಸರ್ಕಾರ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಐಐಟಿ ಮದ್ರಾಸ್‌ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಮೊದಲ ಸ್ಥಾನ ಪಡೆದರೆ, ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (IISc) ಸತತ 3ನೇ ವರ್ಷವೂ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಹೊರ ಹೊಮ್ಮಿದೆ. ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಕರ್ನಾಟಕದ ಉಡುಪಿಯಲ್ಲಿರುವ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ ಈ ಬಾರಿ 2ನೇ ಸ್ಥಾನ ಪಡೆದಿದೆ.

ಇಂಜಿನಿಯರಿಂಗ್, ನಿರ್ವಹಣೆ, ಕಾನೂನು, ಫಾರ್ಮಸಿ, ವೈದ್ಯಕೀಯ, ದಂತ ವೈದ್ಯಕೀಯ, ವಾಸ್ತುಶಿಲ್ಪ, ಕಾಲೇಜು, ವಿಶ್ವವಿದ್ಯಾನಿಲಯಗಳು, ಸಂಶೋಧನೆ ಮುಂತಾದ 11 ವಿಭಾಗಗಳಿಗೆ ಶ್ರೇಯಾಂಕಗಳನ್ನು ವಿವಿಧ ಮಾನದಂಡಗಳಡಿ ನೀಡಲಾಗಿದೆ. ತಮ್ಮ ಪ್ರವರ್ಗದ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದ ಶಿಕ್ಷಣ ಸಂಸ್ಥೆಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌, ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ.

ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು, ದೊರೆತಿರುವ ಶ್ರೇಯಾಂಕ ಹೀಗಿದೆ..:

Higher Educational Institutions

Higher Educational Institutions

ETV Bharat Logo

Copyright © 2024 Ushodaya Enterprises Pvt. Ltd., All Rights Reserved.