ETV Bharat / bharat

ಎನ್ಐಎಯಲ್ಲಿ ಕಾನ್ಸ್​ಟೆಬಲ್​, ಇನ್ಸ್​​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Jan 12, 2024, 12:46 PM IST

ಎನ್​ಐಎ ಮತ್ತು ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್​​ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

MRPl and NIA Recruitment notification
MRPl and NIA Recruitment notification

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಲ್ಲಿ(ಎನ್‌ಐಎ) ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇನ್ಸ್​​ಪೆಕ್ಟರ್​, ಸಬ್​ ಇನ್ಸ್​​ಪೆಕ್ಟರ್​​, ಕಾನ್ಸ್​​ಟೆಬಲ್​ ಸೇರಿದಂತೆ 119 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಯೋಜನೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಅಥವಾ ಕೇಂದ್ರಾಡಳಿತ ಸರ್ಕಾರದಲ್ಲಿ ಈ ಹುದ್ದೆಗಳಿಗೆ ಸಮನಾದ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಧಿಸೂಚನೆ
ಅಧಿಸೂಚನೆ

ಹುದ್ದೆಗಳ ವಿವರ:

ಇನ್ಸ್​ಪೆಕ್ಟರ್-​ 42

ಸಬ್​ ಇನ್ಸ್​​ಪೆಕ್ಟರ್- 51

ಅಸಿಸ್ಟಂಟ್​ ಸಬ್​ ಇನ್ಸ್​​ಪೆಕ್ಟರ್- 13

ಹೆಡ್​ ಕಾನ್ಸ್​​ಟೆಬಲ್​- 12

ವಿದ್ಯಾರ್ಹತೆ: ಇನ್ಸ್​ಪೆಕ್ಟರ್​​, ಸಬ್​ ಇನ್ಸ್​​ಪೆಕ್ಟರ್​​, ಅಸಿಸ್ಟೆಂಟ್​ ಸಬ್​ ಇನ್ಸ್​​ಪೆಕ್ಟರ್​​ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು. ಹೆಡ್​ ಕಾನ್ಸ್​​ಟೆಬಲ್​ ಹುದ್ದೆಗೆ ಪಿಯುಸಿ ಮುಗಿಸಿರಬೇಕು. ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ, ಕೇಂದ್ರಾಡಳಿತ ಸರ್ಕಾರದಲ್ಲಿ ತತ್ಸಮಾನ ಹುದ್ದೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಅಪರಾಧ ಪ್ರಕರಣಗಳ ತನಿಖೆ ಮಾಡಿರುವ ಕನಿಷ್ಠ ಎರಡು ವರ್ಷದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ವಿಳಾಸ- ಎಸ್​​ಪಿ (ಆಡಳಿತ), ಎನ್​ಐಎ ಮುಖ್ಯ ಕಚೇರಿ, ಸಿಜಿಒ ಕಾಂಪ್ಲೆಕ್ಸ್​​ ಎದುರು, ಲೋಧಿ ರಸ್ತೆ, ನವದೆಹಲಿ -110003.

ಡಿಸೆಂಬರ್​ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 20 ಕಡೇಯ ದಿನ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ ಅಭ್ಯರ್ಥಿಗಳು nia.gov.in ಇಲ್ಲಿಗೆ ಭೇಟಿ ನೀಡಿ.

ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್​​ ಲಿಮಿಟೆಡ್​​ನಲ್ಲಿ 27 ಹುದ್ದೆಗಳು: ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್​​ ಲಿಮಿಟೆಡ್​​ನಲ್ಲಿ ಸಹಾಯಕ ಇಂಜಿನಿಯರ್​ ಮತ್ತು ಸಹಾಯಕ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: ಕೆಮಿಕಲ್​ ಇಂಜಿನಿಯರಿಂಗ್​, ಮೆಕ್ಯಾನಿಕಲ್​ ಇಂಜಿನಿಯರಿಂಗ್​, ಎಲೆಕ್ಟ್ರಿಕಲ್​ ಇಂಜಿನಿಯರಿಂಗ್​, ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಇ ಅಥವಾ ಬಿಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಗರಿಷ್ಠ 27 ವರ್ಷ ವಯೋಮಿತಿ ಹೊಂದಿರಬೇಕಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 118 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಜನವರಿ 12ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 10 ಕಡೇಯ ದಿನಾಂಕ. ಸಂಪೂರ್ಣ ಮಾಹಿತಿಗೆ mrpl.co.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: 5,124 ಹುದ್ದೆಗಳ ಭರ್ತಿಗೆ KEA ಅಧಿಸೂಚನೆ; BMTC ಸೇರಿದಂತೆ ಹಲವು ನಿಗಮದಲ್ಲಿ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.