ETV Bharat / bharat

ಯುಪಿ ವಿಧಾನಸಭೆ ಚುನಾವಣೆ: ಮುಲಾಯಂ ಸೊಸೆ ಬಿಜೆಪಿ ಸೇರ್ಪಡೆ

author img

By

Published : Jan 16, 2022, 11:56 AM IST

Updated : Jan 19, 2022, 12:12 PM IST

ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. ಇವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಸೋಲೊಪ್ಪಿಕೊಂಡಿದ್ದರು.

Mulayam Singh's daughter-in-law Aparna Yadav likely to join BJP
UP Polls: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ ಸಾಧ್ಯತೆ

ಲಖನೌ(ಉತ್ತರ ಪ್ರದೇಶ): ವಿಧಾನಸಭಾ ಚುನಾವಣೆ ಉತ್ತರ ಪ್ರದೇಶದಲ್ಲಿ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್​ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. ಇವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಸೋಲೊಪ್ಪಿಕೊಂಡಿದ್ದರು. ನಂತರದ ದಿನಗಳಲ್ಲಿ ಸಮಾಜವಾದಿ ಪಕ್ಷದಲ್ಲಿದ್ದರೂ ಎನ್​ಡಿಎ ಸರ್ಕಾರದ ನೀತಿಗಳನ್ನು ಬೆಂಬಲಿಸುತ್ತಿದ್ದರು. ಈಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ದುಷ್ಪರಿಣಾಮ ಬೀರಲಿದೆ.

ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಅವರು ಇತರ ಶಾಸಕರೊಂದಿಗೆ ತಮ್ಮ ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.

ಇದನ್ನೂ ಓದಿ: ದ್ವೇಷ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬಂಧನ

Last Updated :Jan 19, 2022, 12:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.