ETV Bharat / bharat

ಜಮೀನು ವಿವಾದ: ಯುವತಿ ಕೊಲೆ ಮಾಡಿ, 3 ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

author img

By

Published : Jun 11, 2022, 10:43 AM IST

ಜಮೀನು ವಿಚಾರವಾಗಿ ಯುವತಿಯ ಕೊಲೆ ಮಾಡಿರುವ ಕೆಲ ದುಷ್ಕರ್ಮಿಗಳು, ಮೂರು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಾಸಿಕ್​(ಮಹಾರಾಷ್ಟ್ರ): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಗುಂಪೊಂದು ಯುವತಿ ಕೊಲೆ ಮಾಡಿ, ಮೂರು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ.

ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಾಸಿಕ್​​ನ ಇಗತ್ಪುರಿ ತಾಲೂಕಿನ ಆಧಾರವಾಡದ ಕಟ್ಕರಿ ವಸ್ತಿಯಲ್ಲಿ 20 ವರ್ಷದ ಯುವತಿಯನ್ನ ಹತ್ಯೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ನೂಪುರ್​​ ಹೇಳಿಕೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ.. ರಾಂಚಿಯಲ್ಲಿ ಇಬ್ಬರು ಸಾವು

ಲಭ್ಯವಾಗಿರುವ ಮಾಹಿತಿ ಪ್ರಕಾರ ಆಧಾರವಾಡದ ಕಾಟ್ಕರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 15ರಿಂದ 20 ಜನರ ಗುಂಪೊಂದು 20 ವರ್ಷದ ಯುವತಿ ಕೊಂದಿದ್ದಾರೆ. ಜಮೀನು ವಿವಾದವಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.