ETV Bharat / bharat

ನ್ಯಾಷನಲ್ ಹೆರಾಲ್ಡ್ ಕೇಸ್ : ಮೂರನೇ ದಿನ ಇಡಿ ಮುಂದೆ ಹಾಜರಾದ ರಾಹುಲ್ ಗಾಂಧಿ

author img

By

Published : Jun 15, 2022, 12:28 PM IST

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಇಡಿ ಮುಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಿದ್ದಾರೆ. ವಿಚಾರಣೆ ಮುಂದುವರಿದಿದೆ..

rahul gandhi ED investigation
ರಾಹುಲ್ ಗಾಂಧಿ ಇಡಿ ವಿಚಾರಣೆ

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆ ಮಂಗಳವಾರ ಎರಡನೇ ಸುತ್ತಿನ ವಿಚಾರಣೆ ನಡೆಸಿತ್ತು. ಮೂರನೇ ದಿನವೂ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ಇಡಿ ತಂಡದ ಮುಂದೆ ಇಂದು ರಾಹುಲ್ ಗಾಂಧಿ ಹಾಜರಾಗಿದ್ದಾರೆ.

ಇಡಿ ಮುಂದೆ ಹಾಜರಾದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಇಡಿ ವಿಚಾರಣೆ ಕುರಿತು ಆರೋಪ-ಪ್ರತ್ಯಾರೋಪಗಳು ಮತ್ತು ದೇಶದೆಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಬಿಜೆಪಿ ಹೇಳಿದರೆ, ಕಾಂಗ್ರೆಸ್​ ಅನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಬಿಜೆಪಿ ಸರ್ಕಾರವು ತನ್ನ ಕೇಂದ್ರ ಕಚೇರಿಗೆ ಪಕ್ಷದ ಕಾರ್ಯಕರ್ತರನ್ನು ಪ್ರವೇಶಿಸದಂತೆ ತಡೆಯುವ ಮೂಲಕ ರಾಜಕೀಯ ಚಟುವಟಿಕೆಗಳನ್ನು ತಡೆಯುತ್ತಿದೆ ಎಂದು ಕಾಂಗ್ರೆಸ್ ಇಂದು ಆರೋಪಿಸಿದೆ. ಅಲ್ಲದೇ ಆಡಳಿತ ಪಕ್ಷ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

  • #WATCH | Delhi: Congress leader Rahul Gandhi arrives at the Enforcement Directorate (ED) office to appear for the third consecutive day of questioning in the National Herald case. pic.twitter.com/xxG3vwjMil

    — ANI (@ANI) June 15, 2022 " class="align-text-top noRightClick twitterSection" data=" ">

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಡ್ರಿಲ್

ಪಕ್ಷದ ಮುಖಂಡ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯನ್ನು ಮುಚ್ಚಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ದೇಶದ ವಾತಾವರಣ ಎಲ್ಲರ ಮುಂದಿದೆ.

ಎಐಸಿಸಿ ಕಚೇರಿಯೊಳಗೆ ಸ್ವಂತ ಸಿಬ್ಬಂದಿಯನ್ನು ಕರೆತರಲಾಗಲಿಲ್ಲ. ಬೇರೆ ಯಾರಿಗೂ ಅವಕಾಶವಿಲ್ಲ. ರಾಜಕೀಯ ಕಾರ್ಯಕರ್ತರು ತಮ್ಮ ಪಕ್ಷದ ಕಚೇರಿಗೆ ಪ್ರವೇಶಿಸುವಂತಿಲ್ಲ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಉಳಿದಂತೆ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.