ETV Bharat / bharat

ಲಖಿಂಪುರ್ ಖೇರಿ ಹಿಂಸಾಚಾರ: ಘಟನೆ 'ದುರದೃಷ್ಟಕರ'... ಯಾರೂ ಇಂತಹ ಜವಾಬ್ದಾರಿ ತೆಗೆದುಕೊಳ್ಳಲ್ಲ ಎಂದ ಸುಪ್ರೀಂ!

author img

By

Published : Oct 4, 2021, 4:06 PM IST

Supreme Court
Supreme Court

ಉತ್ತರಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಘಟನೆ ದುರದೃಷ್ಟಕರ ಎಂದಿದೆ.

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್​​ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಮೃತರಾಗಿದ್ದು, ಇದಕ್ಕೆ ಇನ್ನಿಲ್ಲದ ವಿರೋಧ ವ್ಯಕ್ತವಾಗುತ್ತಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸಚಿವ ಅಜಯ್​ ಮಿಶ್ರಾ ಬಂಧನಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಕೂಡ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಲಖಿಂಪುರ್​ ಖೇರಿ ಹಿಂಸಾಚಾರ ಉಲ್ಲೇಖ ಮಾಡಿ ಮಾತನಾಡಿರುವ ಅಟಾರ್ನಿ ಜನರಲ್​ ಕೆ. ವೇಣುಗೋಪಾಲ್​, ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತಕ್ಷಣವೇ ನಿಲ್ಲಿಸಬೇಕು ಎಂದು ಪ್ರತಿಪಾದಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟ್​, ಇಂತಹ ಅಹಿತಕರ ಘಟನೆ ನಡೆದಾಗ ಯಾರೂ ಕೂಡ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಟಾರ್ನಿ ಜನರಲ್​ ಕೆ. ವೇಣುಗೋಪಾಲ್
ಅಟಾರ್ನಿ ಜನರಲ್​ ಕೆ. ವೇಣುಗೋಪಾಲ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ ನಿಲ್ಲಿಸಬೇಕು ಎಂದು ಸುಪ್ರೀಂಕೋರ್ಟ್​ನ ಎಎಮ್​ ಖಾನ್ವಿಲ್ಕರ್​​ ನೇತೃತ್ವದ ಪೀಠಕ್ಕೆ ವೇಣುಗೋಪಾಲ್​ ತಿಳಿಸಿದರು. ಕೇಂದ್ರ ಸರ್ಕಾರ ಈಗಾಗಲೇ ಮೂರು ಕೃಷಿ ಕಾಯ್ದೆ ತಡೆಹಿಡಿದಿದೆ. ಈ ವೇಳೆ ರೈತರು ಪ್ರತಿಭಟನೆ ಯಾವುದಕ್ಕಾಗಿ ನಡೆಸುತ್ತಿದ್ದಾರೆ ಎಂದು ಹೇಳಿರುವ ಅವರು, ನ್ಯಾಯಾಲಯವು ಕಾಯ್ದೆಗಳ ಸಿಂಧುತ್ವ ನಿರ್ಣಯಿಸದೇ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ. ವಾದ ಆಲಿಸಿರುವ ಸುಪ್ರೀಂಕೋರ್ಟ್​​ ಮುಂದಿನ ವಿಚಾರಣೆ ಅಕ್ಟೋಬರ್​​​ 21ರಂದು ಮುಂದೂಡಿಕೆ ಮಾಡಿದೆ.

ಲಖಿಂಪುರ ಖೇರಿಯ ಹಿಂಸಾಚಾರ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನೂತನ ಕೃಷಿ ಕಾಯ್ಧೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದರು. ಅಲ್ಲಿಗೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್​ ಮಿಶ್ರಾ ಮತ್ತು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್​ ಮೌರ್ಯ ಭೇಟಿ ನೀಡಿದ್ದನ್ನ ವಿರೋಧಿಸಿ ರೈತರು ಲಖಿಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲದೇ, ರೈತರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ.. ಸಿಧು ಸೇರಿ ಹಲವರು ಪೊಲೀಸರ ವಶಕ್ಕೆ

ಲಖಿಂಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಎರಡು ಕಾರುಗಳು ಅವರ ಮೇಲೆ ಹರಿದು, ಇಬ್ಬರು ರೈತರು ಮೃತಪಟ್ಟಿದ್ದಾರೆ. ಈ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್​ ಮಿಶ್ರಾ ಒಂದು ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಪರಿಣಾಮ ಹೋರಾಟಗಾರರು ಬಿಜೆಪಿ ಕಾರ್ಯಕರ್ತರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಉರುಳಿಸಿದರು. ಈ ವೇಳೆ, ನಾಲ್ವರು ರೈತರು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.