ETV Bharat / bharat

ಒಡಿಶಾ ರೈಲು ಅಪಘಾತ:ಇನ್ನೂ ಸಿಗದ 101 ಮೃತದೇಹಗಳ ಗುರುತು..55 ಶವ ಸಂಬಂಧಿಕರಿಗೆ ಹಸ್ತಾಂತರ

author img

By

Published : Jun 6, 2023, 7:18 AM IST

Odisha Train Tragedy: 101 bodies still unidentified, 55 handed over to relatives
ಒಡಿಶಾ ರೈಲು ಅಪಘಾತ:ಇನ್ನೂ ಸಿಗದ 101 ಮೃತದೇಹಗಳ ಗುರುತು..55 ಶವ ಸಂಬಂಧಿಕರಿಗೆ ಹಸ್ತಾಂತರ

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ 55 ಶವಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇನ್ನೂ 101 ಮೃತದೇಹಗಳು ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಭುವನೇಶ್ವರ್ (ಒಡಿಶಾ): ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ಕನಿಷ್ಠ 275 ಮಂದಿ ಸಾವನ್ನಪ್ಪಿದ್ದಾರೆ ಎಂದು ಒಡಿಶಾ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಇನ್ನು ಘಟನೆಯಲ್ಲಿ 1000 ಕ್ಕೂ ಹೆಚ್ಚು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಆದರೆ, ಮೃತಪಟ್ಟ 275 ಜನರಲ್ಲಿ ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಆ ಮೃತದೇಹಗಳ ಪತ್ತೆಕಾರ್ಯ ಮುಂದುವರೆದಿದೆ ಎಂದು ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

"ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 275 ಜನರಲ್ಲಿ 101 ಮೃತದೇಹಗಳ ಗುರುತು ಪತ್ತೆಯಾಗದೇ ಹಾಗೆ ಉಳಿದಿವೆ ಎಂದು ರಾಯ್ ತಿಳಿಸಿದ್ದಾರೆ.

ಇದನ್ನು ಓದಿ: ನವ ವಿವಾಹಿತನ ಬಲಿ ಪಡೆದ ಒಡಿಶಾ ರೈಲು ದುರಂತ: ಕುಟುಂಬಸ್ಥರ ಆಕ್ರಂದನ

ಎರಡು ಪ್ರಯಾಣಿಕ ರೈಲುಗಳು ಮತ್ತು ಸರಕು ಸಾಗಣೆ ರೈಲು ಒಳಗೊಂಡ ವಿನಾಶಕಾರಿ ಅಪಘಾತದಲ್ಲಿ ಕನಿಷ್ಠ 275 ಜನರ ಪ್ರಾಣವನ್ನು ಕಳೆದುಕೊಂಡಿದ್ದು, 1100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಕುರಿತು ಮಾತನಾಡಿರುವ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ಆಯುಕ್ತ ವಿಜಯ್ ಅಮೃತ್ ಕುಲಂಗೆ, "ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಸಂಬಂಧಿಕರಿಗೆ ಈಗಾಗಲೇ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. ಮೃತ ದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಶಾಲಿಮಾರ್ - ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಹಲವಾರು ಬೋಗಿಗಳು ಪಕ್ಕದ ಟ್ರ್ಯಾಕ್‌ ಮೇಲೆ ಬಿದ್ದಿದ್ದವು. ಇದೇ ಸಂದರ್ಭದಲ್ಲಿ ಇನ್ನೊಂದು ಟ್ರ್ಯಾಕ್​​ನಲ್ಲಿ ಚಲಿಸುತ್ತಿದ್ದ ಯಶವಂತಪುರ ಹೌರಾ ಎಕ್ಸ್‌ಪ್ರೆಸ್, ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಹೌರಾ ಎಕ್ಸ್​​​ಪ್ರೆಸ್​​ನ ಕೊನೆಯ ಬೋಗಿಗಳು ಹಳಿ ತಪ್ಪಿದ್ದವು.

ಇದನ್ನು ಓದಿ:ಒಡಿಶಾ ರೈಲು ದುರಂತದಲ್ಲಿ 88 ಪ್ರಯಾಣಿಕರ ಪ್ರಾಣ ಉಳಿಸಿದ ಕೆಚ್ಚೆದೆಯ ವೀರರಿವರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.