ETV Bharat / bharat

ಸಂಸದರ ಅಮಾನತು: ಕಪ್ಪು ಪಟ್ಟಿ ಧರಿಸಿ ಗಾಂಧಿ ಪ್ರತಿಮೆ ಮುಂದೆ ವಿಪಕ್ಷಗಳ ಪ್ರತಿಭಟನೆ

author img

By

Published : Dec 2, 2021, 11:45 AM IST

Updated : Dec 2, 2021, 12:12 PM IST

ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳ ಮುಖಂಡರು, ಚಳಿಗಾಲದ ಅಧಿವೇಶನದ ನಾಲ್ಕನೇ ದಿನವೂ ಸಂಸದರ ಅಮಾನತು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

Opposition leaders wearing black bands protest against the suspension parliamentarians
ಸಂಸದರ ಅಮಾನತು ಆದೇಶ ಹಿಂಪಡೆಯಲು ಪಟ್ಟು: ಕಪ್ಪು ಪಟ್ಟಿ ಧರಿಸಿ ಗಾಂಧಿ ಪ್ರತಿಮೆ ಮುಂದೆ ಸಂಸದರ ಪ್ರತಿಭಟನೆ

ನವದೆಹಲಿ: ಚಳಿಗಾಲದ ನಾಲ್ಕನೇ ದಿನದ ಅಧಿವೇಶನ ನಡೆಯುತ್ತಿದೆ. ಇಂದೂ ಕೂಡಾ ರಾಜ್ಯಸಭೆ ಕಲಾಪಕ್ಕೆ ವಿಪಕ್ಷಗಳು ಅಡ್ಡಿಯುಂಟು ಮಾಡಿವೆ. ಎಂದಿನಂತೆ 12 ರಾಜ್ಯಸಭಾ ಸಂಸದ ಅಮಾನತು ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದ ರಾಜ್ಯಸಭೆಯ ವಿಪಕ್ಷಗಳ ಮುಖಂಡರು ಸದನದಿಂದ ಹೊರನಡೆದಿದ್ದಾರೆ.

ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳ ಮುಖಂಡರು, ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ.

ಗಾಂಧಿ ಪ್ರತಿಮೆ ಮುಂದೆ ವಿಪಕ್ಷಗಳ ಪ್ರತಿಭಟನೆ

ಬುಧವಾರವೂ ಸಂಸದರ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದರು. ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ಸಂಸದರ ಅಮಾನತು ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Omicron: ರಾಜ್ಯಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರ ಸಭೆ, ಸಿಎಂ ಬೊಮ್ಮಾಯಿ ಭಾಗಿ

Last Updated : Dec 2, 2021, 12:12 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.