ETV Bharat / bharat

ಮಹಿಳಾ ಅಭ್ಯರ್ಥಿಗಳಿಗೆ ಬಳೆ, ಮಂಗಳಸೂತ್ರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಲು ಸೂಚನೆ: ಪೋಷಕರ ಆಕ್ರೋಶ

author img

By

Published : Aug 21, 2023, 8:41 AM IST

CTET 2023: ಇಟಾವಾದಲ್ಲಿ ನಡೆದ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET) ಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ವಿರುದ್ಧ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

Etawah
ಮಹಿಳಾ ಅಭ್ಯರ್ಥಿಗಳಿಗೆ ಬಳೆ, ಮಂಗಳಸೂತ್ರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಲು ಸೂಚನೆ

ಇಟಾವಾ(ಉತ್ತರ ಪ್ರದೇಶ): ಹಿಜಾಬ್, ಹಲಾಲ್ ಸೇರಿದಂತೆ ಹಲವು ವಿವಾದಗಳು ಈಗಾಗಲೇ ದೇಶದಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದಲ್ಲಿ ಹೊಸ ವಿವಾದ ಶುರುವಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಭಾನುವಾರ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ)ಯನ್ನು ಆಯೋಜಿಸಿತ್ತು. ಈ ವೇಳೆ ಯಾವುದೇ ರೀತಿಯ ಆಭರಣಗಳನ್ನು ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಬರುವುದನ್ನು ಸಿಬಿಎಸ್‌ಇ ನಿಷೇಧಿಸಿದೆ. ಇದು ಮಹಿಳಾ ಅಭ್ಯರ್ಥಿಗಳ ಕುಟುಂಬ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪರೀಕ್ಷಾ ಕೇಂದ್ರದ ಹೊರಗೆ ಸಂಬಂಧಿಕರು ಗಲಾಟೆ ಮಾಡಿದ್ದಾರೆ.

ಉತ್ತರ ಪ್ರದೇಶದ ಇಟಾವಾದಲ್ಲಿ ಸಿಟಿಇಟಿ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ ಮಹಿಳಾ ಅಭ್ಯರ್ಥಿಗಳಿಗೆ ಬಳೆ, ಮಂಗಳಸೂತ್ರ ಹಾಗೂ ಕಾಲುಂಗುರ ತೆಗೆಯುವಂತೆ ಸೂಚಿಸಲಾಯಿತು. ಪೋಷಕರು ಪ್ರತಿಭಟಿಸಿದಾಗ, ನಿಯಮಗಳನ್ನು ಪಾಲಿಸುವಂತೆ ಅಥವಾ ಮನೆಗೆ ಹೋಗುವಂತೆ ಸೂಚಿಸಲಾಯಿತು. ಅಲ್ಲದೇ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳ ಬಳಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹಲವು ಪೋಷಕರು ಆರೋಪಿಸಿದ್ದಾರೆ. ಪರೀಕ್ಷಾ ಕೇಂದ್ರದ ವ್ಯವಸ್ಥೆ ಬಗ್ಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗದ್ದಲ ಸೃಷ್ಟಿಸಿದರು. ಈ ವೇಳೆ, ಶಾಲಾ ಆಡಳಿತ ಮಂಡಳಿಯ ಅಧಿಕಾರಿಗಳು ಏನೂ ಮಾತನಾಡದೇ ಮೌನವಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪರೀಕ್ಷೆ ವೇಳೆ ಬುರ್ಖಾ ತೆಗೆಸಿದ ಶಿಕ್ಷಕರು: ಹೈದರಾಬಾದ್​ ಕಾಲೇಜಿನ ವಿದ್ಯಾರ್ಥಿನಿಯರ ಆರೋಪ

ಸಿಎಂ ಯೋಗಿ ಮಧ್ಯಸ್ಥಿಕೆ ವಹಿಸಬೇಕು: ಬಲವಂತದ ಮೇರೆಗೆ, ಮಹಿಳೆಯರು ತಮ್ಮ ಮಾಂಗಲ್ಯ ತೆಗೆಯಬೇಕಾಯಿತು. ಈ ವಿಚಾರದಲ್ಲಿ ಸಿಎಂ ಯೋಗಿ ಮಧ್ಯಸ್ಥಿಕೆ ವಹಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. ಪರೀಕ್ಷಾ ಕೇಂದ್ರದ ಈ ನಿಯಮ ನಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರಲಿದೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದಾರೆ. ಆದರೆ ಈ ಬಗ್ಗೆ ಶಾಲಾ ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ನಮ್ಮ ಸಂಪ್ರದಾಯಕ್ಕೆ ಧಕ್ಕೆ ತರುತ್ತಿದೆ: ಹೆಣ್ಣು ಮಕ್ಕಳು ಮದುವೆಯಾದ ನಂತರ ಮಂಗಳಸೂತ್ರ, ಕಾಲುಂಗುರ ಹಾಗೂ ಬಳೆಗಳನ್ನು ತೆಗೆಯುವುದಿಲ್ಲ. ಆದರೆ ಇವರು ನಮ್ಮ ಸಂಪ್ರದಾಯದೊಂದಿಗೆ ಆಟವಾಡುತ್ತಿದ್ದಾರೆ. ನಮ್ಮ ಮಕ್ಕಳು ಅನೇಕ ಪರೀಕ್ಷೆಗಳನ್ನು ಬರೆದಿದ್ದಾರೆ. ಎಲ್ಲಿಯೂ ಈ ರೀತಿ ತಪಾಸಣೆ ಮಾಡಿಲ್ಲ. ನಮ್ಮ ಮಕ್ಕಳನ್ನು ಇಂತಹ ಪರೀಕ್ಷೆಗೆ ಒಳಪಡಿಸುವುದು ನಮಗೆ ಇಷ್ಟವಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್​ ಪ್ರಕರಣದ​ ವಿಚಾರಣೆಗೆ ಸುಪ್ರೀಂ ಕೋರ್ಟ್​ ಒಪ್ಪಿಗೆ: ಶೀಘ್ರವೇ ದಿನಾಂಕ ನಿಗದಿ

ಸನಾತನ ಧರ್ಮದಲ್ಲಿ ಬಳೆ, ಕಾಲುಂಗುರ ಮತ್ತು ಮಂಗಳಸೂತ್ರವನ್ನು ವಿವಾಹಿತ ಮಹಿಳೆಯರಿಗೆ ಅವರ ವಿವಾಹದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಪರೀಕ್ಷೆ ನೆಪದಲ್ಲಿ ಸನಾತನ ಧರ್ಮ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ಇದರಿಂದ ನಮ್ಮ ಧರ್ಮಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಪೋಷಕರು ದೂರಿದರು.

ಇದನ್ನೂ ಓದಿ: ಪತ್ನಿಯಾದವಳು 'ತಾಳಿ' ತೆಗೆದಿಡುವುದು ಪತಿಗೆ ನೀಡುವ ಮಾನಸಿಕ ಕ್ರೌರ್ಯದಂತೆ: ಮದ್ರಾಸ್ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.