ETV Bharat / bharat

25 ದಿನಗಳಿಂದ ಇಂಧನ ದರ ಸ್ಥಿರ: ದೇಶ, ರಾಜ್ಯದ ಇಂದಿನ ತೈಲ ಬೆಲೆಯ ಚಿತ್ರಣ ಇಲ್ಲಿದೆ..

author img

By

Published : May 1, 2022, 12:11 PM IST

Updated : May 1, 2022, 1:21 PM IST

fuel price
ಇಂಧನ ದರ

ಇಂದು (ಭಾನುವಾರ) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ದೆಹಲಿ, ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ನೋಡೋಣ.

ನವದೆಹಲಿ: ದೇಶದಲ್ಲಿ ಕಳೆದ 25 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ತೈಲ ಬೆಲೆಯನ್ನು ಮಾ.22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 10 ರೂ. ಹೆಚ್ಚಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.71ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂ. ಹಾಗೂ ಲೀಟರ್ ಡೀಸೆಲ್ ದರ 100.94 ರೂಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂ ಹಾಗೂ ಲೀಟರ್ ಡೀಸೆಲ್ ದರ 105.47 ರೂ.ನಿಗದಿಯಾಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಹೀಗಿದೆ ದರ:

ಜಿಲ್ಲೆಪೆಟ್ರೋಲ್ ದರ ಡೀಸೆಲ್ ದರ
ಬೆಂಗಳೂರು111.11 ರೂ.94.81 ರೂ.
ಹುಬ್ಬಳ್ಳಿ110.81 ರೂ.94.56 ರೂ.
ಮೈಸೂರು110.59 ರೂ.94.34 ರೂ.
ಬೆಳಗಾವಿ 111.67 ರೂ.95.34 ರೂ.
ಶಿವಮೊಗ್ಗ 111.89 ರೂ.95.43 ರೂ.
ದಾವಣಗೆರೆ112.82 ರೂ.96.54 ರೂ.

ಇದನ್ನೂ ಓದಿ: ರಾಜ್ಯದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟು?

Last Updated :May 1, 2022, 1:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.