ETV Bharat / bharat

ಮೋದಿ ಪದವಿ ವಿವಾದ: ಜು.13ರಂದು ಕೋರ್ಟ್‌ಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಮನ್ಸ್‌

author img

By

Published : Jun 7, 2023, 7:58 PM IST

ಗುಜರಾತ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಎಂಬವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

PM Narendra Modi's degree controversy...! Court order Kejriwal to appear on July 13 in university defamation case
ಪ್ರಧಾನಿ ಪದವಿ ವಿವಾದ

ಅಹಮದಾಬಾದ್ (ಗುಜರಾತ್​): ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಶಿಕ್ಷಣಕ್ಕೆ ಸಂಬಂಧಿಸಿದಂತೆ "ಅವಹೇಳನಕಾರಿ" ಹೇಳಿಕೆಗಳಿಗಾಗಿ ಗುಜರಾತ್‌ನ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ನಾಯಕ ಹಾಗು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಜುಲೈ 13 ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ.

ಗುಜರಾತ್ ವಿಶ್ವವಿದ್ಯಾನಿಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಹಮದಾಬಾದ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ ನ್ಯಾಯಾಧೀಶ ಜಯೇಶ್ ಚೋವಾಟಿಯಾ ಅವರು ಇಂದು ಅರ್ಜಿ ವಿಚಾರಣೆ ನಡೆಸಿದರು. ಈ ವೇಳೆ ಜುಲೈ 13 ರಂದು ಇಬ್ಬರು ಎಎಪಿ ನಾಯಕರಿಗೆ ನ್ಯಾಯಾಲಯಕ್ಕೆ ಹಾಜರಿರುವಂತೆ ಆದೇಶಿಸಿದರು.

ಕೇಜ್ರಿವಾಲ್ ಮತ್ತು ಸಿಂಗ್ ಅವರನ್ನು ಪ್ರತಿನಿಧಿಸಿದ ವಕೀಲರು ಅಹಮದಾಬಾದ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಮ್ಮ ಕಕ್ಷಿದಾರರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಕೋರಿದರು. ಅಲ್ಲದೇ, ಪ್ರಕರಣದ ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ವಕೀಲರು ಕೋರ್ಟ್‌ ಮೂಲಕ ಕೇಳಿದ್ದಾರೆ. ಆರೋಪಿಗಳಿಬ್ಬರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಲಯದ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದರು ಎಂದು ಪ್ರಕರಣದಲ್ಲಿ ಗುಜರಾತ್ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ವಕೀಲ ಅಮಿತ್ ನಾಯರ್ ತಿಳಿಸಿದರು.

ಇದನ್ನೂ ಓದಿ: ಜೂನ್​ 15ರ ವರೆಗೆ ಪ್ರತಿಭಟನೆ ಸ್ಥಗಿತ, ಹೋರಾಟದಿಂದ ಹಿಂದೆ ಸರಿದಿಲ್ಲ: ಬಜರಂಗ್​ ಪೂನಿಯಾ

ನ್ಯಾಯಾಲಯವು ಅವರಿಗೆ ದಾಖಲೆಗಳನ್ನು ಒದಗಿಸಿದೆ. ಅವರು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿಗಾಗಿ ಅರ್ಜಿ ಸಲ್ಲಿಸಿದರು. ವಿನಾಯಿತಿ ಅರ್ಜಿ ಸ್ವೀಕರಿಸಿದ ನ್ಯಾಯಾಲಯವು ಸಂಸದರು ಮತ್ತು ಶಾಸಕರ ವಿರುದ್ಧ ತ್ವರಿತ ವಿಚಾರಣೆಗೆ ಒಪ್ಪಿಗೆ ಸೂಚಿಸಿತು. ಇದಕ್ಕೆ ಪ್ರತಿವಾದಿಗಳು ಜುಲೈ 13 ರಂದು ಅರ್ಜಿ ದಾಖಲಿಸಲು ಹಾಜರಾಗುವುದಾಗಿ ಹೇಳಿದರು. ಈ ಹಿಂದೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ನ್ಯಾಯಾಲಯ 25,000 ರೂಪಾಯಿ ದಂಡ ವಿಧಿಸಿತ್ತು. ಇದಕ್ಕೂ ಮೊದಲು, ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ವಿರುದ್ಧ ಮೇಲ್ನೋಟಕ್ಕೆ ಮೊಕದ್ದಮೆ ಇದೆ ಎಂದು ನ್ಯಾಯಾಲಯವು ಗಮನಿಸಿದೆ.

ಪ್ರಧಾನಿ ಮೋದಿ ಪದವಿ ಕುರಿತ ಮುಖ್ಯ ಮಾಹಿತಿ ಆಯುಕ್ತರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಇಬ್ಬರು ಎಎಪಿ ನಾಯಕರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕೇಜ್ರಿವಾಲ್ ಮತ್ತು ಸಿಂಗ್ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್‌ನಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪಟೇಲ್ ಹೇಳಿಕೆಗಳು ಮಾನಹಾನಿಕರ ಮತ್ತು ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶ ಹೊಂದಿವೆ ಎಂದು ದೂರು ನಿಡಿದ್ದರು.

ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ?: ಜಿಲ್ಲಾಡಳಿತದಿಂದ ಅಣಕು ಮತದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.