ETV Bharat / bharat

ಕೇಂದ್ರ ಸಚಿವರ ನಿವಾಸದಲ್ಲಿ ಗಣೇಶನಿಗೆ ಆರತಿ ಮಾಡಿದ ಪ್ರಧಾನಿ ಮೋದಿ

author img

By

Published : Sep 1, 2022, 6:39 AM IST

PM Performs Aarti at Minister Piyush Goyal Home
PM Performs Aarti at Minister Piyush Goyal Home

ನವದೆಹಲಿಯಲ್ಲಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಗಣೇಶ ಚತುರ್ಥಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದು, ಗಣಪತಿಗೆ ಆರತಿ ಬೆಳಗಿದರು.

ನವದೆಹಲಿ: ದೇಶಾದ್ಯಂತ ಸಡಗರ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಅಲ್ಲಿ ಗಣೇಶ ಚತುರ್ಥಿ ಆಚರಣೆಯಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

  • On the auspicious occasion of Ganesh Chaturthi, went to the programme at my colleague @PiyushGoyal Ji’s residence.

    May the blessings of Bhagwan Shri Ganesh always remain upon us. pic.twitter.com/mKfsfcY23H

    — Narendra Modi (@narendramodi) August 31, 2022 " class="align-text-top noRightClick twitterSection" data=" ">

ದೇಶದ ಜನರಿಗೆ ಗಣೇಶ ಚತುರ್ಥಿಯ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಸಂಸ್ಕೃತದಲ್ಲಿನ ಶ್ಲೋಕ ಹಂಚಿಕೊಂಡಿದ್ದಾರೆ.'ಗಣೇಶ ಚತುರ್ಥಿಯ ಶುಭಾಶಯಗಳು. ಶ್ರೀ ಗಣೇಶನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ' ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವರ ನಿವಾಸದಲ್ಲಿ ಗಣೇಶನಿಗೆ ಆರತಿ ಮಾಡಿದ ಪ್ರಧಾನಿ ಮೋದಿ

ಗಣೇಶ ಚತುರ್ಥಿಯಂದು ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಮಂಗಳಮೂರ್ತಿ ಗಣಪತಿಯು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಶ್ರೀ ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ಎಂದು ನಾನು ಬಯಸುತ್ತೇನೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲಾ ನಾಡಿನ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪಾ ಮೋರಿಯಾ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಗಣೇಶ ಚತುರ್ಥಿ ಜೋರು: ಸಮಸ್ತ ಜನತೆಗೆ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ

ಭಾರತದಲ್ಲಿ ಪ್ರತಿ ವರ್ಷ ಸಡಗರ-ಸಂಭ್ರಮದಿಂದ ಗಣೇಶನ ಹಬ್ಬ ಆಚರಣೆ ಮಾಡಲಾಗ್ತದೆ. ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಮುಖ್ಯವಾಗಿ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಮತ್ತು ಗುಜರಾತ್‌ನ ಸೇರಿದಂತೆ ಕೆಲವೊಂದು ರಾಜ್ಯಗಳಲ್ಲಿ ಹೆಚ್ಚು ಸಡಗರದಿಂದ ಈ ಹಬ್ಬ ಆಚರಿಸಲ್ಪಡುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.