ETV Bharat / bharat

Murli Manohar Joshi: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್​ ಜೋಷಿ ಭೇಟಿ ಮಾಡಿದ ಪ್ರಧಾನಿ ಮೋದಿ

author img

By

Published : Jul 30, 2023, 12:40 PM IST

prime-minister-narendra-modi-meets-veteran-bjp-leader-murali-manohar-joshi
ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್​ ಜೋಷಿ ಭೇಟಿ ಮಾಡಿದ ಪ್ರಧಾನಿ ಮೋದಿ

Modi meets Murli Manohar Joshi: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್​ ಜೋಷಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಷಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಗೌರವಾನ್ವಿತ ಮುರಳಿ ಮನೋಹರ್​ ಜೋಶಿಯವರ ಮಾರ್ಗದರ್ಶನ ಮತ್ತು ಆಶೀರ್ವಾದವನ್ನು ಪಡೆದೆ. ಅವರನ್ನು ಭೇಟಿಯಾದ ನಂತರ ನನ್ನಂತಹ ಪ್ರತಿಯೊಬ್ಬ ಕಾರ್ಯಕರ್ತನೂ ಹೊಸ ಶಕ್ತಿಯನ್ನು ಪಡೆಯುತ್ತಾನೆ ಎಂದು ಹೇಳಿದ್ದಾರೆ.

ಮುರಳಿ ಮನೋಹರ್​ ಜೋಷಿ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು, ಬಿಜೆಪಿ ಅಧ್ಯಕ್ಷರಾಗಿ ಮಾತ್ರವಲ್ಲದೆ ಕೇಂದ್ರ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು 80-90ರ ದಶಕದ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಲ್ಲೊಬ್ಬರಾಗಿದ್ದರು.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವರ್ಷದ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಅಖಿಲ ಭಾರತ ಶಿಕ್ಷಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಎಲ್ಲ ಭಾಷೆಗಳಿಗೆ ಸಮಾನ ಗೌರವವನ್ನು ನೀಡುತ್ತದೆ. ಯಾರುಈ ಭಾಷೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೋ ಅವರ ಅಂಗಡಿಗಳು ಮುಚ್ಚುತ್ತದೆ ಎಂದು ಟೀಕಿಸಿದ್ದರು. ಭಾಷೆಗಳ ಆಧಾರದ ಮೇಲೆ ಓರ್ವ ವಿದ್ಯಾರ್ಥಿಯ ಸಾಮರ್ಥ್ಯವನ್ನು ಅಳೆಯುವುದು ವಿದ್ಯಾರ್ಥಿಗೆ ಮಾಡುವ ಅನ್ಯಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡುವುದು ವಿದ್ಯಾರ್ಥಿಗಳಿಗೆ ಹೊಸ ರೀತಿಯ ನ್ಯಾಯವನ್ನು ಒದಗಿಸುತ್ತದೆ. ಇದು ಸಾಮಾಜಿಕ ನ್ಯಾಯ ಹೊಂದುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ವಿವಿಧ ಭಾಷೆಗಳ ಬಳಕೆಯಿಂದ ಹಲವು ರಾಷ್ಟ್ರಗಳು ಅಭಿವೃದ್ಧಿ ಹೊಂದಿದೆ. ಯುರೋಪ್​ ಉದಾಹರಣೆ ನೀಡಿದ ಪ್ರಧಾನಿ ಮೋದಿ, ಹಲವು ದೇಶಗಳು ತಮ್ಮ ಮಾತೃಭಾಷೆಯನ್ನೇ ಹೆಚ್ಚಾಗಿ ನೆಚ್ಚಿಕೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಮಂತ್ರಿ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರು. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಿದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಪ್ರಧಾನಿ ಇದೇ ವೇಳೆ ಬಿಡುಗಡೆ ಮಾಡಿದ್ದರು. ಇಲ್ಲಿನ ಹಳೆ ಪ್ರಗತಿ ಮೈದಾನದಲ್ಲಿರುವ ಹೊಸದಾಗಿ ನಿರ್ಮಿಸಲಾಗಿರುವ ಭಾರತ ಮಂಟಪದಲ್ಲಿ ಎರಡು ದಿನಗಳ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮ ನಡೆಯುತ್ತಿದೆ.

ಮಕ್ಕಳೊಂದಿಗೆ ಮೋದಿ ಸಂವಾದ : ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮದ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಎನ್​ಇಪಿಯಲ್ಲಿನ ವಿಷಯಗಳ ಬಗ್ಗೆ ಮಕ್ಕಳಲ್ಲಿ ಪ್ರಶ್ನಿಸಿದರು.

ಇದನ್ನೂ ಓದಿ : PM Modi on NEP: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ 3 ವರ್ಷ.. ಕಲಿಕೆಯಲ್ಲಿ ಮಾತೃಭಾಷೆ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.