ETV Bharat / bharat

'ಸಿಎಂ ಅಭ್ಯರ್ಥಿಯಾಗಿ ನನ್ನ ಮುಖ ನೋಡಬಹುದಲ್ಲವೇ?' ಪ್ರಿಯಾಂಕಾ ಗಾಂಧಿ ಅಚ್ಚರಿಯ ಹೇಳಿಕೆ

author img

By

Published : Jan 21, 2022, 3:36 PM IST

Uttar Pradesh Assembly polls : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್ ಇಂದು ಯೂತ್​​​ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ವೇಳೆ ಪ್ರಿಯಾಂಕಾ ಗಾಂಧಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ..

Priyanka Gandhi Vadra reaction on CM face
Priyanka Gandhi Vadra reaction on CM face

ಲಖನೌ(ಉತ್ತರಪ್ರದೇಶ) : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್​ ತಮ್ಮ ತಮ್ಮ ಅಭ್ಯರ್ಥಿಗಳ ಲಿಸ್ಟ್ ಕೂಡ ರಿಲೀಸ್ ಮಾಡಿವೆ. ಇದರ ಮಧ್ಯೆ ಪ್ರಿಯಾಂಕಾ ಗಾಂಧಿ ನೀಡಿರುವ ಹೇಳಿಕೆವೊಂದು ಇದೀಗ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷ ಇಂದು ಯುವಕರು ಮತ್ತು ಯುವತಿಯರಿಗೋಸ್ಕರ ಪ್ರತ್ಯೇಕ ಪ್ರಣಾಳಿಕೆ ರಿಲೀಸ್ ಮಾಡಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉತ್ತರಪ್ರದೇಶ ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಧ್ಯಮದವರು ಕೇಳಿರುವ ಪ್ರಶ್ನೆಗೆ ವಿಭಿನ್ನವಾಗಿ ಉತ್ತರಿಸಿದ್ದಾರೆ.

  • #WATCH Do you see anyone else's face from the Congress Party in Uttar Pradesh? You can see my face everywhere: Congress leader Priyanka Gandhi Vadra on being asked about the chief ministerial face of Congress in the upcoming UP Assembly elections pic.twitter.com/NOt1uZKBU6

    — ANI UP/Uttarakhand (@ANINewsUP) January 21, 2022 " class="align-text-top noRightClick twitterSection" data=" ">

ಉತ್ತರಪ್ರದೇಶದ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ಗಾಂಧಿ, 'ನಿಮಗೆ ಬೇರೆ ಮುಖ ಸಿಎಂ ಸ್ಥಾನಕ್ಕೆ ಕಾಣುತ್ತಿದೆಯೇ? ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು' ಅಲ್ಲವೇ ಎಂದು ಹೇಳಿದ್ದಾರೆ. ಈ ಮೂಲಕ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ತಾವು ಎಂಬ ಸುಳಿವು ನೀಡಿದ್ದಾರೆ.

ಇದನ್ನೂ ಓದಿರಿ: T20 ವಿಶ್ವಕಪ್ ​​: ಅ.23ರಂದು ಭಾರತ-ಪಾಕ್​​ ಪೈಟ್​​; ಹೈವೊಲ್ಟೇಜ್​ ಕದನಕ್ಕೆ ಸಾಕ್ಷಿಯಾಗಲಿದೆ ಎಂಸಿಜಿ!

ಉತ್ತರ ಪ್ರದೇಶ ಕಾಂಗ್ರೆಸ್​ ಸಿಎಂ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯಲಿದ್ದಾರೆಂಬ ಮಾತು ಈ ಹಿಂದಿನಿಂದಲೂ ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ಚುನಾವಣೆಯಲ್ಲಿ ಮಹಿಳೆಯರಿಗೆ ಪಕ್ಷ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯಲ್ಲಿ 60ಕ್ಕೂ ಅಧಿಕ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಈಗಾಗಲೇ ಬಿಜೆಪಿಯಿಂದ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್​ ಮುಖ್ಯಮಂತ್ರಿ ಅಭ್ಯರ್ಥಿಗಳಾಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕೂಡ ಈ ರೀತಿಯಾಗಿ ಹೇಳಿಕೆ ನೀಡಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.