ETV Bharat / bharat

ತೈಲ ಬೆಲೆ ಕಡಿತಗೊಳಿಸುವಂತೆ ಕೇಂದ್ರಕ್ಕೆ ಸಿಎಂ ಅಶೋಕ್ ಗೆಹ್ಲೋಟ್ ಮನವಿ

author img

By

Published : Nov 15, 2021, 9:45 AM IST

ಇಂಧನ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗುತ್ತಿದ್ದು, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಮತ್ತಷ್ಟು ಕಡಿತಗೊಳಿಸಬೇಕು ಎಂದು ಸಿಎಂ ಅಶೋಕ್ ಗೆಹ್ಲೋಟ್ ಮನವಿ ಮಾಡಿದ್ದಾರೆ.

ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ( petrol and diesel prices) ಮತ್ತಷ್ಟು ಕಡಿತಗೊಳಿಸುವಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Rajasthan Chief Minister Ashok Gehlot) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತಷ್ಟು ಕಡಿತಗೊಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. 2022 ರಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿದ ನಂತರ ಇಂಧನ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತಿದ್ದು, ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಬೇಕು ಎಂದು ಗೆಹ್ಲೋಟ್ ಹೇಳಿದರು.

ಇನ್ನು ನವೆಂಬರ್‌ನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರ, ದೀಪಾವಳಿಯ ಮುನ್ನಾ ದಿನದಂದು ಗ್ರಾಹಕರಿಗೆ ಗುಡ್​ ನ್ಯೂಸ್​ ನೀಡಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಗೆ ಇಳಿಕೆ ಮಾಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.