ETV Bharat / bharat

ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿ ರೋಗಿ ಸಾವು: ಸಂಬಂಧಿಕರ ಆರೋಪ

author img

By

Published : Jul 13, 2023, 8:26 PM IST

ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿ ರೋಗಿಯು ಸಾವನ್ನಪ್ಪಿದ್ದಾನೆ ಎಂದು ಸಂಬಂಧಿಕರು ಹೇಳಿದ್ದಾರೆ. ಆದರೆ, ಆಸ್ಪತ್ರೆಯ ಅಧಿಕಾರಿಗಳು ಅಗ್ನಿ ಅವಘಡದ ಘಟನೆಯ ಮೊದಲೇ ಅವರು ಸಾವನ್ನಪ್ಪಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

Patient dies as oxygen mask catches fire
ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿ ರೋಗಿ ಸಾವು: ಸಂಬಂಧಿಕರ ಆರೋಪ

ಕೋಟಾ (ರಾಜಸ್ಥಾನ): ರಾಜಸ್ಥಾನದ ಕೋಟಾ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿ ರೋಗಿಯೊಬ್ಬರು ಸುಟ್ಟು ಕರಕಲಾದ ಘಟನೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಸಂಬಂಧಿಕರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಅಗ್ನಿ ಅವಘಡಕ್ಕೂ ಮುನ್ನವೇ ರೋಗಿಯು ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಆಡಳಿತವು ಈ ಆರೋಪ ತಳ್ಳಿಹಾಕಿದೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿ ಸಾವು: ಮೃತರನ್ನು ಅನಂತಪುರ ನಿವಾಸಿ ವೈಭವ್ ಶರ್ಮಾ ಎಂದು ಗುರುತಿಸಲಾಗಿದೆ. ನಾಲ್ಕೈದು ದಿನಗಳ ಹಿಂದೆ ಕರುಳು ಬಿರುಕು ಕಾಣಿಸಿಕೊಂಡಿದ್ದರಿಂದ ವೈಭವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ನಂತರ, ರೋಗಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ರಾತ್ರಿ 11.30ರ ಸುಮಾರಿಗೆ ರೋಗಿಯ ಆರೋಗ್ಯ ಹದಗೆಟ್ಟಿದೆ ಎಂದು ವೈಭವ್ ಸಂಬಂಧಿಕರು ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರೇಟರ್ ನೋಯ್ಡಾದ ಗ್ಯಾಲಕ್ಸಿ ಪ್ಲಾಜಾದಲ್ಲಿ ಅಗ್ನಿ ಅವಘಡ: ಕಟ್ಟಡದ ಮೂರನೇ ಅಂತಸ್ತಿನಿಂದ ಜಿಗಿದ ಇಬ್ಬರು ಸೇಫ್​

ರೋಗಿಯ ಸಂಬಂಧಿಕರಿಂದ ಆರೋಪ: ವೈದ್ಯರು ಸಿಪಿಆರ್ ನೀಡುವ ಮೂಲಕ ಅವರನ್ನು ಬದುಕಿಸಲು ಪ್ರಯತ್ನಿಸಿದರು. ಸಿಪಿಆರ್ ನಡೆಯುತ್ತಿರುವಾಗ, ಎಲೆಕ್ಟ್ರಿಕ್ ಸ್ವಿಚ್ ಬೋರ್ಡ್‌ನಿಂದ ಕಿಡಿಯು ಬೋರ್ಡ್‌ಗೆ ಸಂಪರ್ಕಗೊಂಡಿದ್ದ ರೋಗಿಯ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಸಣ್ಣ ಬೆಂಕಿಯಲ್ಲಿ ರೋಗಿಯು ಸುಟ್ಟು ಕರಕಲಾಗಿ, ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ: ಆದರೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಳ್ಳವ ಮೊದಲೇ ರೋಗಿಯು ಸಾವನ್ನಪ್ಪಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಆರೋಪಗಳನ್ನು ನಿರಾಕರಿಸಿದರು. ರೋಗಿಯ ಸಾವಿನ ನಂತರ ಸಂಬಂಧಿಕರು, ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಗಲಾಟೆ ಮಾಡಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಜೋಡಿ ಕೊಲೆ ಕೇಸ್: ಜಿ-ನೆಟ್ ಮಾಲೀಕನ ಬಂಧನ; ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ಸೆರೆ

ಘಟನೆ ಕುರಿತು ತನಿಖೆಗೆ ಆದೇಶಿಸಿದ ಪ್ರಾಚಾರ್ಯರು: ಗುರುವಾರ ಆಸ್ಪತ್ರೆ ಎದುರು ಜಮಾಯಿಸಿದ ರೋಗಿಯ ಸಂಬಂಧಿಕರು, ನಿರ್ಲಕ್ಷ್ಯ ತೋರಿದ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬ್ರಾಹ್ಮಣ ಕಲ್ಯಾಣ ಪರಿಷತ್ತಿನ ಸಂಚಾಲಕ ಅನಿಲ್ ತಿವಾರಿ ಮಾತನಾಡಿ, ವೈಭವ್ ಶರ್ಮಾ ಕುಟುಂಬ ಸದಸ್ಯರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ಸಂಗೀತಾ ಸಕ್ಸೇನಾ ತಿಳಿಸಿದ್ದಾರೆ.

ಇದನ್ನೂ ಓದಿ: Suicide attempt: ಕೌಟುಂಬಿಕ ಕಲಹದಿಂದ ದಂಪತಿ-ಮಕ್ಕಳು ಆತ್ಮಹತ್ಯೆಗೆ ಯತ್ನ.. ಮಗಳು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.