ETV Bharat / bharat

ಬಸ್​​​ಗೆ ಡಿಕ್ಕಿ ಹೊಡೆದ ಟ್ರಕ್​: ನಾಲ್ವರು ದುರ್ಮರಣ, 25 ಪ್ರಯಾಣಿಕರಿಗೆ ಗಾಯ

author img

By

Published : Sep 3, 2022, 9:45 AM IST

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.

road accident in Uttar pradesh
road accident in Uttar pradesh

ಬಾರಾಬಂಕಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಬಸ್​​ಗೆ ಟ್ರಕ್​ ಡಿಕ್ಕಿ ಹೊಡೆದಿ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 24 ಜನರು ಗಾಯಗೊಂಡಿದ್ದಾರೆ. ಬಾರಾಬಂಕಿಯ ಮಹುಂಗುಪುರ ಬಳಿ ಈ ಘಟನೆ ಸಂಭವಿಸಿದೆ. ಡಬಲ್​ ಡೆಕ್ಕರ್​ ಬಸ್​​ಗೆ ಟ್ರಕ್​ ಡಿಕ್ಕಿ ಹೊಡೆದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಡಬಲ್ ಡೆಕ್ಕರ್​ ಬಸ್​​ ನೇಪಾಳಿ ವಲಸೆ ಕಾರ್ಮಿಕರನ್ನು ಹೊತ್ತು ಗೋವಾಕ್ಕೆ ತೆರಳುತ್ತಿತ್ತು. ಈ ವೇಳೆ ಟೈರ್​ ಪಂಕ್ಚರ್​ ಆಗಿದೆ. ರಸ್ತೆ ಪಕ್ಕದಲ್ಲಿ ಬಸ್​ ನಿಲ್ಲಿಸಿ, ಟೈರ್​​ ಚೇಂಜ್​ ಮಾಡ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್​​ ಡಿಕ್ಕಿ ಹೊಡೆದಿದೆ. ಬಸ್​​ನಲ್ಲಿ ಸುಮಾರು 60 ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದರು. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲ ಬಾರಾಬಂಕಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ವೈದ್ಯರು ಲಕ್ನೋ ಟ್ರಾಮಾ ಸೆಂಟರ್​​ಗೆ ರವಾನಿಸಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ. ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರನ್ನ ನೇಪಾಳಕ್ಕೆ ವಾಪಸ್ ಕಳುಹಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಅಪಘಾತ ನಡೆದ ಸಮಯದಲ್ಲಿ ಪ್ರಯಾಣಿಕರು ಗಾಢನಿದ್ರೆಯಲ್ಲಿದ್ದರು. 25 ಜನರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ವಿಜಯಪುರ: ಭೀಕರ ರಸ್ತೆ ಅಪಘಾತದಲ್ಲಿ ಮಗು, ಬಾಣಂತಿ ಸೇರಿ ಮೂವರು ಸಾವು

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದ್ದು, ಇದೀಗ ಅವರ ಕುಟುಂಬಕ್ಕೆ ಹಸ್ತಾಂತರಿಸುವ ಕೆಲಸ ನಡೆಯತ್ತಿದೆ. ಎನ್​​​ಸಿಆರ್​​ಬಿ ಪ್ರಕಾರ, 2021ರಲ್ಲಿ ಉತ್ತರ ಪ್ರದೇಶದಲ್ಲಿ 24,711 ಜನರು ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. 2021ರಲ್ಲೇ ಭಾರತದಲ್ಲಿ ದಾಖಲೆಯ 4.22 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.73 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.