ETV Bharat / bharat

ಪ.ಬಂಗಾಳ ಸೇರಿ ಈಶಾನ್ಯದ 7 ರಾಜ್ಯಗಳಿಗೆ 35,000 ಸ್ವಚ್ಛಸೇವಕರ ನೇಮಕಕ್ಕೆ ಮುಂದಾದ ಆರ್‌ಎಸ್‌ಎಸ್‌

author img

By

Published : May 12, 2022, 10:14 AM IST

RSS
RSS

ಈಶಾನ್ಯ ಭಾರತದ ಏಳು ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ, ಸಿಕ್ಕಿಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮಿಜೋರಾಂನಲ್ಲಿ ಆರ್‌ಎಸ್‌ಎಸ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ 35,000 ಸ್ವಚ್ಛಸೇವಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ಭಾರತದ 7 ರಾಜ್ಯಗಳಲ್ಲಿ 35,000 ಸ್ವಚ್ಛಸೇವಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ಈಶಾನ್ಯ ಭಾರತದ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಸಿಕ್ಕಿಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮಿಜೋರಾಂನಲ್ಲಿ ಆರ್‌ಎಸ್‌ಎಸ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಹೊಸ ಕ್ರಮಗಳನ್ನು ಅಳವಡಿಸಲಾಗುತ್ತಿದೆ. ನೇಮಕಾತಿಯನ್ನು ಹಂತಹಂತಗಳಲ್ಲಿ ಮಾಡಲಾಗುವುದು, ಆರಂಭದಲ್ಲಿ 5,000 ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಆರ್​ಎಸ್​ಎಸ್​ ಹೊಸ ಶಾಖೆಗಳಿಂದ ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ 2024ರ ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಸೇರಿದಂತೆ ಇಡೀ ಈಶಾನ್ಯ ಭಾರತದಲ್ಲಿ ಸಂಘಟನೆಯನ್ನು ಬಲಪಡಿಸುವುದು ಮುಖ್ಯ ಗುರಿ. ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ನಿರ್ದೇಶನದ ಮೇರೆಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಪ್ರಥಮವಾಗಿ ಪಶ್ಚಿಮ ಬಂಗಾಳದಿಂದಲೇ ನೂತನ ಸ್ವಯಂಸೇವಕರನ್ನು ನೇಮಿಸುವ ಕಾರ್ಯ ನಡೆಯಲಿದೆ.

ಆರ್​ಎಸ್​ಎಸ್​ಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸ್ವಯಂಸೇವಕರ ನೇಮಕಾತಿ ಪ್ರಕ್ರಿಯೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸಂಸ್ಥೆಗೆ ಸೂಚಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಹೊಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಹೊಸ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕಿದೆ ಎಂದು ಹಿರಿಯ ಆರ್‌ಎಸ್‌ಎಸ್ ಸದಸ್ಯರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ವಿಡಿಯೋ: ರನ್‌ ವೇಯಿಂದ ಸ್ಕಿಡ್‌ ಆದ ಟಿಬೆಟ್‌ ವಿಮಾನಕ್ಕೆ ಬೆಂಕಿ; 25 ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.