ETV Bharat / bharat

ಮದ್ಯ ನೀತಿ ಹಗರಣ: ಇಡಿ ಚಾರ್ಜ್​ಶೀಟ್​ನಲ್ಲಿ ತಪ್ಪಾಗಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೆಸರು ಉಲ್ಲೇಖ

author img

By

Published : May 3, 2023, 3:45 PM IST

ದೆಹಲಿ ಸರ್ಕಾರದ ನೂತನ ಮದ್ಯ ನೀತಿ ಹಗರಣದ ಕುರಿತ ಚಾರ್ಜ್​ಶೀಟ್​ನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೆಸರು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

sanjay-singhs-name-wrongly-included-in-charge-sheet-of-liquor-scam
ಮದ್ಯ ನೀತಿ ಹಗರಣ: ಇಡಿ ಚಾರ್ಜ್​ಶೀಟ್​ನಲ್ಲಿ ತಪ್ಪಾಗಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೆಸರು ಉಲ್ಲೇಖ?

ನವದೆಹಲಿ: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ದೆಹಲಿ ಸರ್ಕಾರದ ನೂತನ ಮದ್ಯ ನೀತಿ ಹಗರಣದಲ್ಲಿ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೆಸರು ಉಲ್ಲೇಖಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಹಿನ್ನಡೆಯಾಗಿದೆ. ಸಂಜಯ್ ಸಿಂಗ್ ಹೆಸರನ್ನು ತಪ್ಪಾಗಿ ಚಾರ್ಜ್​ಶೀಟ್​ನಲ್ಲಿ ಸೇರಿಸಲಾಗಿದೆ ಎಂದು ಇಡಿ ಒಪ್ಪಿಕೊಂಡಿದ್ದು, ಅದನ್ನು ತೆಗೆದುಹಾಕಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದಾಗಿ ಸ್ಪಷ್ಟನೆ ನೀಡಿದೆ ಎಂದು ವರದಿಯಾಗಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕ ತನಿಖೆ ನಡೆಸುತ್ತಿದೆ. ಇಲ್ಲಿಯವರೆಗೆ ಎರಡೂ ತನಿಖಾ ಸಂಸ್ಥೆಗಳು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನೂ ದಾಖಲಿಸಿವೆ. ಆದರೆ, ಇತ್ತೀಚೆಗೆ ಇಡಿ ಸಲ್ಲಿಸಿದ ಪೂರಕ ಚಾರ್ಜ್ ಶೀಟ್‌ನಲ್ಲಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಹೆಸರು​ ಉಲ್ಲೇಖಿಸಿದ್ದು, ಹೊಸ ಚರ್ಚೆಗೆ ಕಾರಣವಾಗಿತ್ತು.

  • मोदी के इशारे पर नाचने वाली ED ने इतिहास में पहली बार अपनी गलती मानी। मोदी जी @ArvindKejriwal और @AamAadmiParty कि छवि खराब करना चाहते है। लाख कोशिश करलो सफल नही हो पाओगे क्योंकि ED की जांच मोदी की साजिश है। pic.twitter.com/jagOe0ytrI

    — Sanjay Singh AAP (@SanjayAzadSln) May 3, 2023 " class="align-text-top noRightClick twitterSection" data=" ">

ಇಡಿ ಈ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಜಯ್​ ಸಿಂಗ್​ ಮಾಧ್ಯಮಗೋಷ್ಟಿ ನಡೆಸಿ, ಇಡಿ 48 ಗಂಟೆಯೊಳಗೆ ಆರೋಪ ಪಟ್ಟಿಯಲ್ಲಿರುವ ತಮ್ಮ ಹೆಸರನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದರು. ಅಲ್ಲದೇ, ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಮತ್ತು ಸಹಾಯಕ ನಿರ್ದೇಶಕ ಜೋಗಿಂದರ್ ಸಿಂಗ್ ನನ್ನ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅಲ್ಲದೆ, ಈ ಇಬ್ಬರೂ ಅಧಿಕಾರಿಗಳು ತಮ್ಮ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದರು.

ಈ ಬಗ್ಗೆ ಇಡಿ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು. ಇಡಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ಕೇಂದ್ರ ಹಣಕಾಸು ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಜೊತೆಗೆ ಇಡಿ ಅಧಿಕಾರಿಗಳಿಗೆ ಬಗ್ಗೆ ಮಾನನಷ್ಟ ನೋಟಿಸ್‌ ಸಹ ಕಳುಹಿಸಿದ್ದರು. ಈ ನೋಟಿಸ್​ಗೆ ಇಡಿ ತನ್ನ ಉತ್ತರವನ್ನು ನೀಡಿದ್ದು, ಚಾರ್ಜ್‌ಶೀಟ್‌ನಲ್ಲಿ ತಪ್ಪಾಗಿ ಹೆಸರು ಕಾಣಿಸಿಕೊಂಡಿದೆ ಎಂಬುವುದಾಗಿ ಹೇಳಿದೆ.

  • ED के झूठ का पर्दाफ़ाश करेंगे।
    अग्रिम कार्यवाही के लिये भारत सरकार के वित्त सचिव को मेरा पत्र। pic.twitter.com/84f9NLk9Id

    — Sanjay Singh AAP (@SanjayAzadSln) May 3, 2023 " class="align-text-top noRightClick twitterSection" data=" ">

ಸಿಬಿಐಗೆ ಹೈಕೋರ್ಟ್​ ನೋಟಿಸ್​: ಮತ್ತೊಂದೆಡೆ, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಬುಧವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಸಿಸೋಡಿಯಾ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 26ರಂದು ಅವರನ್ನು ಸಿಬಿಐ ಬಂಧಿಸಿತ್ತು.

ಇದೀಗ ತಮ್ಮ ಪತ್ನಿಯ ಅನಾರೋಗ್ಯವನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನಿಗೆ ಸಿಸೋಡಿಯಾ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವಾರ ಅನಾರೋಗ್ಯದ ಕಾರಣ ಸಿಸೋಡಿಯಾ ಅವರ ಪತ್ನಿಯ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್ ನ್ಯಾಯಾಲಯದ ಗಮನಕ್ಕೆ ತಂದರು. ಈ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ಈ ಹಿಂದೆ ದಿ ರೋಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಕುಪ್ವಾರದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಎನ್​ಕೌಂಟರ್​ ಮಾಡಿದ ಸೇನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.